Publish Date: Wed, 04 Oct 2017 (18:17 IST)
Updated Date: Wed, 04 Oct 2017 (18:20 IST)
ಸಿಎಂ ಸಿದ್ದರಾಮಯ್ಯ ಉತ್ತಮವಾಗಿ ಜನಪರ ಸರಕಾರ ನಡೆಸುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಶ್ಲಾಘಿಸಿದ್ದಾರೆ.
ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು , ಸಿಎಂ ಸಿದ್ದರಾಮಯ್ಯ ಸಾಮಾಜಿಕ ನ್ಯಾಯ, ಸಿದ್ದಾಂತಕ್ಕೆ ನ್ಯಾಯ ಒದಗಿಸಿದ್ದಾರೆ. ರೈತರ ಸಾಲ ಮನ್ನಾ ಮಾಡುವ ಮೂಲಕ ರೈತರ ಸಂಕಷ್ಟಕ್ಕೆ ಪರಿಹಾರ ಒದಗಿಸಿದ್ದಾರೆ ಎಂದು ತಿಳಿಸಿದ್ದಾರೆ.
ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಕಾಂಗ್ರೆಸ್ ಸರಕಾರ ಜನಹಿತಕ್ಕಾಗಿ ಸೇವೆ ಸಲ್ಲಿಸಿದೆ. ಸಿದ್ದರಾಮಯ್ಯರದ್ದು ಬೆಸ್ಟ್ ಮ್ಯಾನೇಜ್‌ಮೆಂಟ್ ಸರಕಾರ. ಯುಪಿಎ ಸರಕಾರ ಜಾರಿಗೆ ತಂದ ಆಹಾರ ಭದ್ರತೆ ಕಾಯ್ದೆಯಿಂದ ಕೋಟಿ ಕೋಟಿ ಜನರಿಗೆ ಲಾಭವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಇಡೀ ದೇಶದಲ್ಲಿ ಬೆಂಗಳೂರು ನಂಬರ್ ಒನ್ ಸ್ಥಾನದಲ್ಲಿದೆ. ಐಟಿ ಹಬ್ ಸೇರಿದಂತೆ ಸಿಲಿಕಾನ್ ವ್ಯಾಲಿ ಎನ್ನುವ ಖ್ಯಾತಿಗೆ ಪಾತ್ರವಾಗಿದೆ. ರಾಜ್ಯ ಸರಕಾರದ ಯೋಜನೆಗಳು ಜನಪರವಾಗಿವೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.