ದೇಶದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನರಾಗಿದ್ದಾರೆ. ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆಗೆ ದಾಖಲಾಗಿದ್ದ ಪ್ರಣಬ್ ಮುಖರ್ಜಿ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮಾಜಿ ರಾಷ್ಟ್ರಪತಿಗೆ 84 ವರ್ಷ ವಯಸ್ಸಾಗಿತ್ತು. ಬ್ರೇನ್ ಸರ್ಜರಿಗೆ ಒಳಗಾದ ಬಳಿಕ ಕೋಮಾಗೆ ಜಾರಿದ್ದರು.