Select Your Language

Notifications

webdunia
webdunia
webdunia
webdunia

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಇನ್ನಿಲ್ಲ

Ex Prime Minister Dr.Manmohan Singh No More, Manmohan Sing Achievements, Manmohan Singh Political Journey

Sampriya

ನವದೆಹಲಿ , ಗುರುವಾರ, 26 ಡಿಸೆಂಬರ್ 2024 (22:32 IST)
Photo Courtesy X
ನವದೆಹಲಿ: 92ವರ್ಷದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಇಂದು ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.

ಮನಮೋಹನ್ ಸಿಂಗ್ ಅವರ ನಿಧನದ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಅವರು ಬರೆದುಕೊಂಡಿದ್ದಾರೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಬಗ್ಗೆ ತಿಳಿದು ನನಗೆ ಅತೀವ ದುಃಖವಾಗಿದೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಆಳವಾದ ಸಂತಾಪಗಳು. ನಮ್ಮ ದೇಶಕ್ಕೆ ನೀವು ಮಾಡಿದ ಸೇವೆಗೆ ಧನ್ಯವಾದಗಳು. ನಿಮ್ಮ ಆರ್ಥಿಕ ಕ್ರಾಂತಿ ಮತ್ತು ಪ್ರಗತಿಪರ ಬದಲಾವಣೆಗಳಿಗಾಗಿ ನಿಮ್ಮನ್ನು ಯಾವಾಗಲೂ ಸ್ಮರಿಸಲಾಗುವುದು ಎಂದು ಅವರು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಗುರುವಾರ ಸಂಜೆ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಯನ್ನು ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು. ಅವರ ಸ್ಥಿತಿ ಚಿಂತಾಜನಕವಾಗಿದ್ದರಿಂದ ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಿಸಲಾಗಿತ್ತು.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಇಂದು ಮುಂಜಾನೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರನ್ನು ದಾಖಲಿಸಿರುವ ದೆಹಲಿ ಏಮ್ಸ್ ಗೆ ತಲುಪಿದ್ದರು

Share this Story:

Follow Webdunia kannada

ಮುಂದಿನ ಸುದ್ದಿ

2025ರಲ್ಲಿ ಮತ್ತೇ ಕೋವಿಡ್ 4ನೇ ಅಲೆ ಸ್ಫೋಟ: ಫ್ಯಾಕ್ಟ್‌ಚೆಕ್‌ನಲ್ಲಿ ಅಸಲಿ ಸತ್ಯ ಬಯಲು