Webdunia - Bharat's app for daily news and videos

Install App

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

Sampriya
ಶುಕ್ರವಾರ, 27 ಡಿಸೆಂಬರ್ 2024 (11:02 IST)
Photo Courtesy X
ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

ಮನಮೋಹನ್ ಸಿಂಗ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ. ಮನಮೋಹನ್ ಸಿಂಗ್ ಕೇವಲ ರಾಜಕಾರಣಿ ಅಲ್ಲ. ಅವರೊಬ್ಬ ದೇಶ ಹಾಗೂ ಈ ಜಗತ್ತು ಕಂಡ ಮಹಾನ್ ಆರ್ಥಿಕ ತಜ್ಞ ಎಂದು ಬಣ್ಣಿಸಿದ್ದಾರೆ.

ಇಂದು ಭಾರತ ಜಾಗತಿಕ ಮಟ್ಟದಲ್ಲಿ ಆರ್ಥಿಕ ಪ್ರಗತಿ ಸಾಧಿಸಿದ್ದರೆ ಅದಕ್ಕೆ ಪ್ರಮುಖ ಕಾರಣ ಮನಮೋಹನ್ ಸಿಂಗ್ ಅವರ ಕ್ರಾಂತಿಕಾರಿ ನೀತಿಗಳು. ದೇಶ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾಗ ಜಾಗತೀಕರಣಕ್ಕೆ ಒಡ್ಡಿಕೊಳ್ಳುವ ಮೂಲಕ ದೇಶವನ್ನು ಕಾಪಾಡಿದ ಆಪದ್ಭಾಂದವ ಎಂದಿದ್ದಾರೆ.

ಇದೇ ಕಾರಣಕ್ಕೆ ಸೋನಿಯಾ ಗಾಂಧಿ ಅವರು ತಮ್ಮ ಪಾಲಿಗೆ ಬಂದ ಪ್ರಧಾನಿ ಹುದ್ದೆಯನ್ನು ಮನಮೋಹನ್ ಸಿಂಗ್ ಅವರಿಗೆ ಬಿಟ್ಟುಕೊಟ್ಟರು. ಯುಪಿಎ ಮೊದಲ ಹಾಗೂ ಎರಡನೇ ಸರ್ಕಾರದ ಅವಧಿಯಲ್ಲಿ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರು ನರೇಗಾ, ಮಾಹಿತಿ ಹಕ್ಕು, ಶೈಕ್ಷಣಿಕ ಹಕ್ಕು, ಆಹಾರ ಭದ್ರತಾ ಕಾಯ್ದೆಯಂತಹ ಕ್ರಾಂತಿಕಾರಿ ಯೋಜನೆಗಳನ್ನು ದೇಶದ ಜನತೆಗೆ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಇಂದು ಸಿಂಗ್ ಅವರು ದೈಹಿಕವಾಗಿ ನಮ್ಮಿಂದ ದೂರವಾಗಿರಬಹುದು. ಆದರೆ ಅವರು ಈ ದೇಶಕ್ಕೆ ನೀಡಿರುವ ಕೊಡುಗೆ ಮೂಲಕ ಸದಾ ಜೀವಂತವಾಗಿರುತ್ತಾರೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು, ಸ್ನೇಹಿತರು ಹಾಗೂ ಅವರ ಒಡನಾಡಿಗಳಿಗೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments