ಸರ್ಕಾರಿ ಗೌರವದೊಂದಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನಾಳೆ

Sampriya
ಶುಕ್ರವಾರ, 27 ಡಿಸೆಂಬರ್ 2024 (10:09 IST)
Photo Courtesy X
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ಗುರುವಾರ ರಾತ್ರಿ ನಿಧನ ಹೊಂದಿದ್ದು, ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಶನಿವಾರ ನಡೆಯಲಿದೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಅಧಿಕೃತ ಮಾಹಿತಿಯನ್ನು ಇಂದು (ಶುಕ್ರವಾರ) ತಿಳಿಸಲಾಗುವುದು ಎಂದಿದ್ದಾರೆ.

ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಡಿಸೆಂಬರ್ 28 ರಂದು ನಡೆಯಲಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನ ಸೇರಿದಂತೆ ಏಳು ದಿನಗಳ ಕಾಲ ಕಾಂಗ್ರೆಸ್‌ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಸಿಂಗ್ ಅವರ ಪಾರ್ಥಿವ ಶರೀರ ಏಮ್ಸ್ ನಿಂದ ಗುರುವಾರ ತಡರಾತ್ರಿ ಅವರ ನಿವಾಸಕ್ಕೆ ತಲುಪಿದೆ. ಇಂದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.

ಈಗಾಗಲೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್‌ನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಡಾ.ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments