ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

Sampriya
ಬುಧವಾರ, 15 ಅಕ್ಟೋಬರ್ 2025 (14:25 IST)
Photo Credit X
ತಿರುವನಂತಪುರಂ: ಕೀನ್ಯಾ ಮಾಜಿ ಪ್ರಧಾನಿ ರೈಲಾ ಒಡಿಂಗಾ ಅವರು ಅನಾರೋಗ್ಯಕ್ಕಾಗಿ ಆಯುರ್ವೇದ ಚಿಕಿತ್ಸೆಗೆಂದು ಭಾರತಕ್ಕೆ ಬಂದಿದ್ದರು. ಅವರು ಕೇರಳದಲ್ಲಿ ಇಂದು ಹೃದಯಸ್ತಂಭನದಿಂದ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಕೇರಳದ ಎರ್ನಾಕುಲಂ ಜಿಲ್ಲೆಯ ಕೂಥಾಟುಕುಳಂಗೆ 80 ವರ್ಷದ ರೈಲಾ ಒಡಿಂಗಾ ಆಯುರ್ವೇದ ಚಿಕಿತ್ಸೆಗಾಗಿ ಬಂದಿದ್ದರು. ಬುಧವಾರ ಮುಂಜಾನೆ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಕುಸಿದು ಬಿದ್ದಿದ್ದಾರೆ. 

ಅವರನ್ನು ಕೂಡಲೇ ಕೂಥಾಟುಕುಳಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಸ್ಪಂದಿಸದೆ ರೈಲಾ ಒಡಿಂಗಾ ಕೊನೆಯುಸಿರೆಳೆದಿದ್ದಾರೆ. ಸದ್ಯ ರೈಲಾ ಒಡಿಂಗಾ ಅವರ ಮೃತದೇಹವನ್ನು ಆಸ್ಪತ್ರೆಯಲ್ಲೇ ಇರಿಸಲಾಗಿದೆ. 

ಮೃತದೇಹ ಹಸ್ತಾಂತರ ಸೇರಿದಂತೆ ಮುಂದಿನ ಪ್ರಕ್ರಿಯೆಗಾಗಿ ಪ್ರಾದೇಶಿಕ ನೋಂದಣಿ ಕಚೇರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರೈಲಾ ಒಡಿಂಗಾ ಕುಟುಂಬ ಇದಕ್ಕೂ ಮೊದಲು ಈ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ಹಿಂದೆ ರೈಲಾ ಒಡಿಂಗಾ ಅವರ ಪುತ್ರಿ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕಣ್ಣಿನ ದೃಷ್ಟಿ ಮರಳಿ ಪಡೆದಿದ್ದರು. 

ನನ್ನ ಆತ್ಮೀಯ ಸ್ನೇಹಿತ ಮತ್ತು ಕೀನ್ಯಾದ ಮಾಜಿ ಪ್ರಧಾನಿ ಶ್ರೀ ರೈಲಾ ಒಡಿಂಗಾ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ಉನ್ನತ ರಾಜಕಾರಣಿ ಮತ್ತು ಭಾರತದ ಪ್ರೀತಿಯ ಸ್ನೇಹಿತರಾಗಿದ್ದರು. ಅವರು ಭಾರತ, ನಮ್ಮ ಸಂಸ್ಕೃತಿ, ಮೌಲ್ಯಗಳು ಮತ್ತು ಪ್ರಾಚೀನ ಬುದ್ಧಿವಂತಿಕೆಯ ಬಗ್ಗೆ ವಿಶೇಷ ಪ್ರೀತಿಯನ್ನು ಹೊಂದಿದ್ದರು. ಅವರು ವಿಶೇಷವಾಗಿ ಆಯುರ್ವೇದ ಮತ್ತು ಭಾರತದ ಸಾಂಪ್ರದಾಯಿಕ ಔಷಧ ಪದ್ಧತಿಗಳನ್ನು ಮೆಚ್ಚಿದರು. ಈ ದುಃಖದ ಸಮಯದಲ್ಲಿ ನಾನು ಅವರ ಕುಟುಂಬ, ಸ್ನೇಹಿತರು ಮತ್ತು ಕೀನ್ಯಾದ ಜನರಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೀಪಾವಳಿ ಪಟಾಕಿ ಹೊಗೆ ತಾಕಿ ಹೀಗೆಲ್ಲಾ ಆಗುತ್ತಿದೆಯೇ, ತಕ್ಷಣ ಏನು ಮಾಡಬೇಕು

ಕಾಂಗ್ರೆಸ್ ಶಾಸಕ, ಆರ್ ಎಸ್ಎಸ್ ಕಾರ್ಯಕರ್ತನಾಗಿದ್ದ ಶಾಸಕ ಅಶೋಕ್ ರೈ ಸಂಘದ ಬಗ್ಗೆ ಹೇಳಿದ್ದೇನು

ಮಲ್ಲಿಕಾರ್ಜುನ ಖರ್ಗೆ ಪುತ್ರನ ನಂತರ ಈಗ ರಾಜ್ಯ ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಪುತ್ರನ ಹವಾ

ಬಿಜೆಪಿಯವರ ಭ್ರಷ್ಟಾಚಾರ ಕತೆ ಹೇಳಲು ಮೂರು ರಾತ್ರಿ ಸಾಲದು: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments