Webdunia - Bharat's app for daily news and videos

Install App

ಮಾಜಿ ಪ್ರಧಾನಿ ರಾಜೀವ್‌ ಗಾಂಧಿ 33ನೇ ಪುಣ್ಯತಿಥಿ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರಿಂದ ನಮನ

Sampriya
ಮಂಗಳವಾರ, 21 ಮೇ 2024 (10:57 IST)
Photo By Instagram
ನವದೆಹಲಿ: ಇಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 33ನೇ ಪುಣ್ಯತಿಥಿ  ಹಿನ್ನೆಲೆ ಅವರಿಗೆ ಪ್ರಧಾನಿ ಮೋದಿ ಸೇರಿದಂತೆ ಗಣ್ಯರು ನಮನ ಸಲ್ಲಿಸಿದರು.

ಏಕ್ಸ್‌ನಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ ಅವರು, ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಅವರ ಪುಣ್ಯತಿಥಿಯಂದು ಅವರಿಗೆ ನನ್ನ ನಮನಗಳು ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

ಇನ್ನೂ ರಾಜೀವ್‌ ಗಾಂಧಿ ಅವರ 33ನೇ ಪುಣ್ಯತಿಥಿ ಹಿನ್ನೆಲೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಸಂಸದ ರಾಹುಲ್ ಗಾಂಧಿ ಅವರು ಮಂಗಳವಾರ ಬೆಳಿಗ್ಗೆ ದೆಹಲಿಯ ವೀರ ಭೂಮಿಯಲ್ಲಿ ರಾಜೀವ್ ಗಾಂಧಿ ಅವರಿಗೆ ನಮನ ಸಲ್ಲಿಸಿದರು.
 

ಪಿ ಚಿದಂಬರಂ ಮತ್ತು ಸಚಿನ್ ಪೈಲಟ್ ಅವರಂತಹ ಇತರ ಕಾಂಗ್ರೆಸ್ ನಾಯಕರು ರಾಷ್ಟ್ರ ರಾಜಧಾನಿಯಲ್ಲಿ ಮಾಜಿ ಪ್ರಧಾನಿಗೆ ಗೌರವ ಸಲ್ಲಿಸಿದರು.

1984 ರಲ್ಲಿ  ತಾಯಿ ಮತ್ತು ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯ ನಂತರ ರಾಜೀವ್ ಗಾಂಧಿ ಅವರು ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡರು. ಅವರು ಅಕ್ಟೋಬರ್ 1984 ರಲ್ಲಿ ಅಧಿಕಾರ ವಹಿಸಿಕೊಂಡಾಗ ಅವರು 40 ನೇ ವಯಸ್ಸಿನಲ್ಲಿ ಭಾರತದ ಅತ್ಯಂತ ಕಿರಿಯ ಪ್ರಧಾನಿಯಾದರು.

ಅವರು ಡಿಸೆಂಬರ್ 2, 1989 ರವರೆಗೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಆಗಸ್ಟ್ 20, 1944 ರಲ್ಲಿ ಜನಿಸಿದ ರಾಜೀವ್ ಗಾಂಧಿಯವರು ಮೇ 21 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಚುನಾವಣಾ ರ್ಯಾಲಿಯಲ್ಲಿ ಲಿಬರೇಶನ್ ಟೈಗರ್ಸ್ ಆಫ್ ತಮಿಳು ಈಳಂ (ಎಲ್ಟಿಟಿಇ) ಆತ್ಮಹತ್ಯಾ ಬಾಂಬರ್‌ನಿಂದ ಹತ್ಯೆಗೀಡಾದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments