ನವದೆಹಲಿ : ಮಾಜಿ ಕೇಂದ್ರ ಸಚಿವ ಮತ್ತು ಮಾಜಿ ಜೆಡಿಯು ಪಕ್ಷದ ಅಧ್ಯಕ್ಷ ಶರದ್ ಯಾದವ್(75) ನಿಧನರಾಗಿದ್ದಾರೆ.
ಶರದ್ ಯಾದವ್ ಪುತ್ರಿ ಸುಭಾಷಿಣಿ ಶರದ್ ಯಾದವ್ ಪಾಪಾ ನಹೀ ರಹೇ (ತಂದೆ ಇನ್ನಿಲ್ಲ) ಎಂದು ಟ್ವೀಟ್ ಮಾಡುವ ಮೂಲಕ ಸುದ್ದಿಯನ್ನು ತಿಳಿಸಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶರದ್ ಯಾದವ್ ಅವರನ್ನು ಗುರುಗ್ರಾಮ್ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ನಿಧನರಾಗಿದ್ದಾರೆ.