Publish Date: Mon, 26 Sep 2022 (08:30 IST)
Updated Date: Mon, 26 Sep 2022 (08:56 IST)
ನವದೆಹಲಿ: ಕಾಮಕ್ಕೆ ಕಣ್ಣಿಲ್ಲ ಎನ್ನುವುದು ಈ ಘಟನೆಯಿಂದ ಮತ್ತೊಮ್ಮೆ ಸಾಬೀತಾಗಿದೆ. 12 ವರ್ಷದ ಅಪ್ರಾಪ್ತ ಬಾಲಕನ ಮೇಲೆ ನಾಲ್ವರು ಕಾಮುಕರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ.
ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವುದಲ್ಲದೆ ಮಾರಣಾಂತಿಕವಾಗಿ ಹಲ್ಲೆ ಮಾಡಲಾಗಿದೆ. ಇದರಿಂದಾಗಿ ಬಾಲಕನ ಸ್ಥಿತಿ ಚಿಂತಾಜನಕವಾಗಿದೆ. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕೃತ್ಯ ನಡೆಸಿದ ನಾಲ್ವರ ಪೈಕಿ ಮೂವರನ್ನು ಬಂಧಿಸಿ ಇನ್ನೋವರ್ನಿಗಾಗಿ ಹುಡುಕಾಟ ನಡೆಸಿದ್ದಾರೆ.