ಕಾಶ್ಮಿರದ ಕುಪ್ವಾರಾ ಜಿಲ್ಲೆಯ ನೌಗಾಮ್ ಸೆಕ್ಟರ್‌ನಲ್ಲಿ ಸೇನಾಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ಕು ಉಗ್ರರು ಹತರಾಗಿದ್ದು, ಒಬ್ಬ ಉಗ್ರನನ್ನು ಜೀವಂತವಾಗಿ ಸೆರೆಹಿಡಿಯಲಾಗಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
ನೌಗಾಮ್ ಸೆಕ್ಟರ್‌ನಲ್ಲಿ ಉಗ್ರರು ಅಡಗಿದ್ದಾರೆ ಎನ್ನುವ ಖಚಿತ ಮಾಹಿತಿ ಪಡೆದ ಸೇನಾಪಡೆಗಳು ಉಗ್ರರು ಅಡಗಿದ್ದ ಸ್ಥಳವನ್ನು ಸುತ್ತುವರಿದು ಗುಂಡಿನ ದಾಳಿ ನಡೆಸಿವೆ. ಸ್ಥಳದಲ್ಲಿಯೇ ನಾಲ್ವರು ಉಗ್ರರು ಹತರಾಗಿದ್ದರೆ ಒಬ್ಬನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.
ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ಸದ್ಯಕ್ಕೆ ಯಾವುದೇ ಹೇಳಿಕೆ ನೀಡುವ ಸ್ಥಿತಿಯಲ್ಲಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಒಬ್ಬ ಉಗ್ರನನ್ನು ಜೀವಂತವಾಗಿ ಹಿಡಿದಿದ್ದರಿಂದ ಆತನಿಂದ ಹೆಚ್ಚಿನ ಮಾಹಿತಿ ಲಭಿಸಬಹುದು ಎಂದು ಸೇನಾಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.