ಪಣಜಿ : ರಾಜ್ಯದ ಜನರಿಗೆ ಮೂರು ಎಲ್ಪಿಜಿ ಸಿಲಿಂಡರ್ಗಳನ್ನು ಉಚಿತವಾಗಿ ನೀಡಲು 40ಕೋಟಿ ರೂ. ಮೊತ್ತವನ್ನು ನೀಡುವುದಾಗಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಘೋಷಿಸಿದರು.
ವಿಧಾನಸಭೆಯಲ್ಲಿ ಈ ಬಾರಿಯ ರಾಜ್ಯ ಬಜೆಟ್ನ್ನು ಮಂಡಿಸಿದ ಅವರು ರಾಜ್ಯದ ಮತ್ತು ಜನರ ಅಭಿವೃದ್ಧಿ ಹಾಗೂ ಸಮೃದ್ಧಿಗಾಗಿ ಈ ಬಜೆಟ್ ಆಗಿದೆ ಎಂದು ಹೇಳಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಂದು ಗೋವಾ ವಿಧಾನಸಭೆಯಲ್ಲಿ 2022-23ನೇ ಸಾಲಿನ ರಾಜ್ಯ ಬಜೆಟ್ನ್ನು ಮಂಡಿಸಿದ್ದಾರೆ.
ಗೋವಾ ಜನತೆಗೆ, ರಾಜ್ಯದ ಅಭಿವೃದ್ಧಿಗೆ ಹಾಗೂ ರಾಜ್ಯದ ಏಳಿಗೆಗಾಗಿ ಇರುವ ಬಜೆಟ್ ಇದಾಗಿದೆ ಎಂದು ತಿಳಿಸಿದರು.