Webdunia - Bharat's app for daily news and videos

Install App

ದೆಹಲಿಯ ವೃದ್ಧರಿಗೆ ಉಚಿತ ಚಿಕಿತ್ಸೆ: ಹೊಸ ಯೋಜನೆ ಘೋಷಿಸಿದ ಅರವಿಂದ್ ಕೇಜ್ರಿವಾಲ್

Sampriya
ಬುಧವಾರ, 18 ಡಿಸೆಂಬರ್ 2024 (16:25 IST)
Photo Courtesy X
ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 'ಸಂಜೀವನಿ ಯೋಜನೆ'ಯನ್ನು ಪ್ರಾರಂಭಿಸುವುದಾಗಿ ಬುಧವಾರ ಘೋಷಿಸಿದ್ದಾರೆ, ಇದು ವೃದ್ಧರಿಗೆ ಉಚಿತ ಚಿಕಿತ್ಸೆ ನೀಡುವ ಗುರಿಯನ್ನು ಹೊಂದಿದೆ. ದೆಹಲಿಯ 60 ವರ್ಷ ಮೇಲ್ಪಟ್ಟವರು  ಯೋಜನೆಯ ಪ್ರಯೋಜನವನ್ನು ಪಡೆಯಬಹುದು..

ಸಾರ್ವಜನಿಕ ಸಮಾರಂಭವೊಂದರಲ್ಲಿ ಮಾತನಾಡಿದ ಕೇಜ್ರಿವಾಲ್, " ವಯಸ್ಸು ಹೆಚ್ಚಾದಂತೆ, ಹಲವಾರು ರೋಗಗಳು ವ್ಯಕ್ತಿಯನ್ನು ಬಾಧಿಸುತ್ತದೆ, ಚಿಕಿತ್ಸೆ ಹೇಗೆ ಪಡೆಯುವುದು ಎಂಬುದು ದೊಡ್ಡ ಚಿಂತೆ. ಉತ್ತಮ ಕುಟುಂಬದಿಂದ ಬಂದವರ ಬಗ್ಗೆ ನನಗೂ ತಿಳಿದಿದೆ, ಆದರೆ ಅವರ ಮಕ್ಕಳು ವೃದ್ಧಾಪ್ಯದಲ್ಲಿ ಅವರನ್ನು ನೋಡಿಕೊಳ್ಳುವುದಿಲ್ಲ, ಅವರ ಮಕ್ಕಳು ಅವರನ್ನು ತೊರೆದುಹೋದರು ಎಂಬಂತೆ ನರಳುತ್ತಿರುವುದನ್ನು ನಾನು ನೋಡಿದ್ದೇನೆ.

ಮಾತು ಮುಂದುವರಿಸಿದ ಅವರು, ಇಂದು ದೆಹಲಿಯ ವೃದ್ಧರಿಗಾಗಿ ಸಂಜೀವನಿ ಯೋಜನೆ ಘೋಷಣೆ ಮಾಡಲಿದ್ದೇನೆ, 60 ವರ್ಷ ಮೇಲ್ಪಟ್ಟ ನಮ್ಮ ಹಿರಿಯರಿಗೆ ಉಚಿತ ಚಿಕಿತ್ಸೆ ಸಿಗಲಿದೆ, ಚುನಾವಣೆ ನಂತರ ಈ ಯೋಜನೆ ತಂದು ಪಾಸು ಮಾಡುತ್ತೇವೆ.

ಈ ಯೋಜನೆಯು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯನ್ನು ಒದಗಿಸುತ್ತದೆ ಎಂದು ಕೇಜ್ರಿವಾಲ್ ವಿವರಿಸಿದರು. ಯಾರು ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬಯಸುತ್ತಾರೆ, ಅವರ ಸಂಪೂರ್ಣ ಚಿಕಿತ್ಸೆಯು ಉಚಿತವಾಗಿರುತ್ತದೆ, ಯಾವುದೇ ಮಿತಿಗಳಿಲ್ಲ; ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತದೆ, ಶ್ರೀಮಂತರಾಗಿರಲಿ ಅಥವಾ ಬಡವರಾಗಿರಲಿ, ಎಲ್ಲರಿಗೂ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. ಯಾವುದೇ ಗರಿಷ್ಠ ಮಿತಿ ಇರುವುದಿಲ್ಲ. ," ಅವರು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments