Publish Date: Mon, 19 Oct 2020 (11:17 IST)
Updated Date: Mon, 19 Oct 2020 (11:19 IST)
ರಾಯ್ ಪುರ : ಅಪ್ರಾಪ್ತ ಬುಡಕಟ್ಟು ಜನಾಂಗದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ನಾಲ್ವರು ಆರೋಪಿಗಳನ್ನು ಚತ್ತೀಸ್ ಗಢದ ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತೆಗೆ ಆರೋಪಿಯೊಬ್ಬನ ಜೊತೆ ದೈಹಿಕ ಸಂಬಂಧವಿತ್ತು. ಆದರೆ ಆತ ತನ್ನ ಮೂವರು ಸ್ನೇಹಿತರ ಜೊತೆ ಸೇರಿ ಕೊಲೆ ಬೆದರಿಕೆ ಹಾಕಿ ಆಕೆಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಇದರ ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಹೆರಿಗೆ ಸಮಯ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
ಬಾಲಕಿಯ ತಾಯಿ ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.