Publish Date: Sun, 04 Sep 2022 (07:29 IST)
Updated Date: Sun, 04 Sep 2022 (09:31 IST)
ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ಮಹತ್ವದ ಜವಾಬ್ದಾರಿ ನೀಡಿದ್ದಾರೆ. ಎಲ್ಲರನ್ನೂ ಸೇರಿಸಿಕೊಂಡು ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರಕ್ಕೆ ಅಧಿಕಾರಕ್ಕೆ ತರುತ್ತೇವೆ.
ಪ್ರಧಾನಿ ಅವರೇ ತಿಂಗಳಿಗೊಮ್ಮೆ ರಾಜ್ಯಕ್ಕೆ ಭೇಟಿ ನೀಡುವುದಾಗಿ ಹೇಳಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಚುನಾವಣೆ ಸಿದ್ಧತೆ ಬಗ್ಗೆ ಹೇಳಿಕೊಂಡಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೋದಿ ಚುನಾವಣೆ ವೇಳೆ ನನ್ನನ್ನು ಕೇಂದ್ರೀಯ ಸಂಸದೀಯ ಮಂಡಳಿಗೆ ಆಯ್ಕೆ ಮಾಡಿದ್ದಾರೆ. ಮುಂದಿನ ಚುನಾವಣೆಗೆ ರಾಜ್ಯದ ಉದ್ದಗಲಕ್ಕೂ ಸಂಚರಿಸಿ 150 ಸ್ಥಾನಗಳನ್ನು ಗೆಲ್ಲಿಸುತ್ತೇನೆ.
ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡಿದ ವೇಳೆ ಸಹ ಮುಂಬರುವ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಗುರಿ ನೀಡಿದ್ದಾರೆ.