Publish Date: Thu, 15 Nov 2018 (10:02 IST)
Updated Date: Thu, 15 Nov 2018 (10:04 IST)
ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಚಂಡಮಾರುತ ಗಜ ತಮಿಳುನಾಡು, ಪುದುಚೇರಿ ಕರಾವಳಿಗೆ ಅಪ್ಪಳಿಸಿದ್ದು, ಇಲ್ಲಿ ಭಾರೀ ಮಳೆಯಾಗುತ್ತಿದೆ.
ನಿನ್ನೆ ತಮಿಳುನಾಡು ಕರಾವಳಿಗೆ ಅಪ್ಪಳಿಸಿದ ಗಜ ಚಂಡಮಾರುತ ಇಂದು ಇನ್ನಷ್ಟು ತೀವ್ರಗೊಳ್ಳುವ ಲಕ್ಷಣಗಳಿವೆ. ಗಜ ದಾಳಿಯಿಂದಾಗಿ ತಮಿಳುನಾಡು, ಪುದುಚೇರಿ ಅಲ್ಲದೆ, ಆಂಧ್ರಪ್ರದೇಶದ ಕೆಲವು ಭಾಗಗಳಲ್ಲೂ ಭಾರೀ ಮಳೆಯಾಗುತ್ತಿದೆ. ಕರ್ನಾಟಕದಲ್ಲೂ ಇದರ ಪರಿಣಾಮ ಬೀರುವ ಸಾಧ್ಯತೆಯಿದೆ.
ಭಾರೀ ಮಳೆ, ಗಾಳಿ ಹಿನ್ನಲೆಯಲ್ಲಿ ಕರಾವಳಿಯಲ್ಲಿ ನೌಕಾ ಪಡೆ ಕಟ್ಟೆಚ್ಚರ ವಹಿಸಿದೆ. ಎನ್ ಡಿಆರ್ ಎಫ್ ಸೇರಿದಂತೆ ರಕ್ಷಣಾ ತಂಡಗಳು ವಿಪತ್ತು ಎದುರಿಸಲು ಸನ್ನದ್ಧವಾಗಿದೆ. ಮಳೆ ಇನ್ನಷ್ಟು ತೀವ್ರಗೊಳ್ಳುವ ಸೂಚನೆ ಇರುವುದರಿಂದ ಮುನ್ನಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.