Select Your Language

Notifications

webdunia
webdunia
webdunia
webdunia

ಉದ್ಯೋಗದ ಆಮಿಷವೊಡ್ಡಿ ವಂಚಿಸುತ್ತಿದ್ದ ಗ್ಯಾಂಗ್ ಆರೆಸ್ಟ್!

ಉದ್ಯೋಗದ ಆಮಿಷವೊಡ್ಡಿ ವಂಚಿಸುತ್ತಿದ್ದ ಗ್ಯಾಂಗ್ ಆರೆಸ್ಟ್!
ನವದೆಹಲಿ , ಭಾನುವಾರ, 10 ಏಪ್ರಿಲ್ 2022 (10:24 IST)
ದೆಹಲಿ: ವಿವಿಧ ಕಂಪೆನಿಗಳಲ್ಲಿ ಉದ್ಯೋಗ ನೀಡುವುದಾಗಿ ಜನರನ್ನು ನಂಬಿಸಿ ವಂಚಿಸುತ್ತಿದ್ದ ತಂಡವೊಂದನ್ನು ದೆಹಲಿಯ ಸೈಬರ್ ಪೊಲೀಸಿನವರು ಬಂಧಿಸಿದ್ದಾರೆ.

ಆರೋಪಿಗಳು ನಕಲಿ ಕಾಲ್ ಸೆಂಟರ್ ನಡೆಸುತ್ತಿದ್ದು ಜನರಿಗೆ ಉದ್ಯೋಗದ ಆಮಿಷವೊಡ್ಡಿ ವಂಚಿಸುತ್ತಿದ್ದರು. ಈ ತಂಡ ಕಳೆದ ನಾಲ್ಕು ತಿಂಗಳಿನಲ್ಲಿ 100ಕ್ಕೂ ಹೆಚ್ಚು ಜನರಿಗೆ ಮೋಸಗೈದಿದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾದ 5 ಮಹಿಳೆಯರು ಸೇರಿದಂತೆ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಕಾಲ್ ಸೆಂಟರ್ ನಡೆಸುತ್ತಿದ್ದ ಆವರಣದಲ್ಲಿ 23 ಮೊಬೈಲ್ ಫೋನ್ ಗಳು, ಎರಡು ಲ್ಯಾಪ್ ಟಾಪ್, ಆರು ಎಟಿಎಂ ಕಾರ್ಡ್ ಗಳು ಹಾಗೂ ಇತರೆ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನವಜಾತ ಮಗುವಿನ ಮಾರಾಟ; ತಂದೆ ಸೇರಿದಂತೆ ಆರು ಮಂದಿ ವಶ