Publish Date: Sat, 01 Apr 2023 (06:40 IST)
Updated Date: Sat, 01 Apr 2023 (01:43 IST)
ವಡೋದರ ನಗರದ ಫತೇಹ್ಪುರ ಪ್ರದೇಶದಲ್ಲಿ ರಾಮ ನವಮಿ ಉತ್ಸವದ ಅಂಗವಾಗಿ ಗುರುವಾರ ನಡೆಯುತ್ತಿದ್ದ ಶೋಭಾಯಾತ್ರೆ ಮೇಲೆ ಕಲ್ಲುತೂರಾಟ ನಡೆಸಿದ್ದ 24 ಮಂದಿ ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಮ ನವಮಿ ಆಚರಣೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಜನರನ್ನು ವಶಕ್ಕೆ ಪಡೆದಿದ್ದೇವೆ. ಎಫ್ಐಆರ್ ದಾಖಲಾದ ಬಳಿಕ ಎಲ್ಲರನ್ನೂ ಅಧಿಕೃತವಾಗಿ ಬಂಧಿಸಲಾಗುವುದು. ಸದ್ಯ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಜನಜೀವನ ಸಹಜ ಸ್ಥಿತಿಯಲ್ಲಿದೆ ಎಂದು ವಡೋದರ ಪೊಲೀಸ್ ಕಮಿಷನರ್ ಶಮ್ಶೇರ್ ಸಿಂಗ್ ಹೇಳಿದ್ದಾರೆ.
ಅಲ್ಲದೇ ಮುಂಬೈನಲ್ಲಿ 21 ಮಂದಿಯನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ. ಈ ನಡುವೆ ಪಶ್ಚಿಮ ಬಂಗಾಳದ ಬಿಜೆಪಿ ಮುಖ್ಯಸ್ಥ ಸುಕಾಂತ ಮಜುಂದಾರ್ ರಾಮ ನವಮಿಯಂದು ರಾಜ್ಯದಲ್ಲಿ ಭುಗಿಲೆದ್ದ ಹಿಂಸಾಚಾರದ ಬಗ್ಗೆ ಕೇಂದ್ರೀಯ ಸಂಸ್ಥೆಯಿಂದ ತನಿಖೆ ನಡೆಸುವಂತೆ ಕೋರಿ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.