Publish Date: Fri, 12 Oct 2018 (10:09 IST)
Updated Date: Fri, 12 Oct 2018 (10:11 IST)
ಉತ್ತರ ಪ್ರದೇಶ : ಅಪ್ರಾಪ್ತೆಗೆ ಮತ್ತು ಬರಿಸುವ ಜ್ಯೂಸ್ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಗಾಜಿಯಾಬಾದ್ ನಲ್ಲಿ ನಡೆದಿದೆ.
ಸಂತ್ರಸ್ತೆ ಗೆಳತಿಯ ಬರ್ತ್ ಡೇ ಪಾರ್ಟಿಗೆ ಹೋಗುತ್ತಿರುವ ಮಾರ್ಗದಲ್ಲಿ ಎದುರಾದ ನಾಲ್ಕು ಜನ ಕಾಮುಕರು ಆಕೆಗೆ ಬಲವಂತವಾಗಿ ಮತ್ತು ಬರಿಸುವ ಜ್ಯೂಸ್ ಕುಡಿಸಿ ಹೋಟೆಲ್ ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಅದನ್ನು ಮೊಬೈಲ್ ನಲ್ಲಿ ಸೆರೆಹಿಡಿದು ಆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಹಾಗೇ ಈ ವಿಚಾರವನ್ನು ಮನೆಯವರಿಗೆ ತಿಳಿಸದಂತೆ ಬೆದರಿಕೆಯೊಡ್ಡಿದ್ದಾರೆ.
ಆದರೆ ಬಾಲಕಿ ನಡೆದ ವಿಚಾರವನ್ನು ಮನೆಯವರಿಗೆ ತಿಳಿಸಿದ್ದರಿಂದ ಪೋಷಕರು ದುರುಳರ ವಿರುದ್ಧ ದೂರು ದಾಖಲಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಓರ್ವನನ್ನು ಬಂಧಿಸಿದ್ದು, ಉಳಿದ ಆರೋಪಿಗಳ ಸೆರೆಗೆ ಬಲೆ ಬೀಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.