Publish Date: Mon, 11 Mar 2019 (06:48 IST)
Updated Date: Mon, 11 Mar 2019 (06:50 IST)
ಮುಜಫರ್ ನಗರ : ಕಾಮುಕರ ಗುಂಪೊಂದು 15ವರ್ಷದ ಬಾಲಕಿಗೆ ಗನ್ ತೋರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರಪ್ರದೇಶದ ಮುಜಫರ್‍ನಗರದಲ್ಲಿ ನಡೆದಿದೆ.
ಬಾಲಕಿ ಮೇವು ತರಲು ಗದ್ದೆಗೆ ಹೋಗಿದ್ದ ಸಂದರ್ಭದಲ್ಲಿ ನಾಲ್ವರು ಕಾಮುಕರ ಗುಂಪು ಬಾಲಕಿಯನ್ನು ಅಡ್ಡಗಟ್ಟಿ ಕಬ್ಬಿನ ಗದ್ದೆಗೆ ಎಳೆದುಕೊಂಡು ಹೋಗಿ ಬಾಲಕಿಗೆ ಗನ್ ತೋರಿಸಿ ಪ್ರಾಣ ಬೆದರಿಕೆ ಹಾಕಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾರೆ.
ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಮುಕರ ವಿರುದ್ಧ ಪೊಕ್ಸೊ ಕಾಯ್ದೆ ಸೆಕ್ಷನ್ 376ಡಿ(ಗ್ಯಾಂಗ್‍ರೆಪ್) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.