Webdunia - Bharat's app for daily news and videos

Install App

7ನೇ ಕ್ಲಾಸ್ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್..!

Webdunia
ಗುರುವಾರ, 25 ಮೇ 2023 (12:04 IST)
ಚಂಡೀಗಢ : 11 ವರ್ಷದ ಬಾಲಕಿಯ ಮೇಲೆ ನಾಲ್ವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಚಂಡೀಗಢದಲ್ಲಿ ನಡೆದಿದೆ.
 
ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಅತ್ಯಾಚಾರಗೈದ ನಾಲ್ವರು ಅಪ್ರಾಪ್ತ ಆರೋಪಿಗಳಲ್ಲಿ ಓರ್ವ ಆಕೆಯ ಸಹಪಾಠಿಯಾಗಿದ್ದು, ಉಳಿದ ಮೂವರು ಸರ್ಕಾರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಾಗಿದ್ದಾರೆ. ಅತ್ಯಾಚಾರಗೈದ ಅಪ್ರಾಪ್ತ ಆರೋಪಿಗಳು ಕಳೆದ 6 ತಿಂಗಳಿನಿಂದ ಸಂತ್ರಸ್ತೆಗೆ ಬೆದರಿಕೆ ಹಾಕುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಘಟನೆ 15 ದಿನಗಳ ಹಿಂದೆ ನಡೆದಿದ್ದು, ಆಕೆಯ ಮೇಲೆ ಪದೇ ಪದೇ ಅತ್ಯಾಚಾರ ನಡೆಸಲಾಗಿದೆಯೇ ಎಂದು ತಿಳಿದು ಬಂದಿಲ್ಲ. ನಾಲ್ವರು ಅಪ್ರಾಪ್ತರು ತನ್ನ ಮಗಳ ಮೇಲೆ ಶಾಲೆಯ ಆವರಣದ ಪೊದೆಯ ಹಿಂದೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. ಅಲ್ಲದೇ ಅಪ್ರಾಪ್ತರು ಬಾಲಕಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. 

ಅತ್ಯಾಚಾರ ನಡೆದ ಬಳಿಕ ಸಂತ್ರಸ್ತೆ ತೀವ್ರ ಆಘಾತಕ್ಕೊಳಗಾಗಿದ್ದಳು. 15 ದಿನಗಳ ಬಳಿಕ ಆಕೆ ತನ್ನ ತಾಯಿಯ ಬಳಿ ಈ ಘಟನೆಯ ಬಗ್ಗೆ ಹೇಳಿಕೊಂಡಳು. ವಿಷಯ ತಿಳಿದ ತಕ್ಷಣ ಆಕೆಯ ತಾಯಿ ತರಗತಿ ಶಿಕ್ಷಕರು ಹಾಗೂ ಪ್ರಾಂಶುಪಾಲರನ್ನು ಭೇಟಿಯಾಗಿ ಘಟನೆಯ ಬಗ್ಗೆ ವಿವರಿಸಿದರು. ಈ ವೇಳೆ ಸಂತ್ರಸ್ತೆಯ ತರಗತಿ ಶಿಕ್ಷಕಿ ಮಗುವಿನ ಸಹಾಯವಾಣಿಗೆ ಕರೆ ಮಾಡಿ ವಿಷಯವನ್ನು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಗೀನ ಮಕ್ಕಳಿಗೆ ಬುದ್ದಿ ಹೇಳುವುದು ಕಷ್ಟ, ಮೊಬೈಲ್ ಗೀಳು ಬಿಡು ಎಂದಿದ್ದಕ್ಕೆ ಯುವತಿ ಹೀಗೇ ಮಾಡೋದಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

ಗಡಿಯಲ್ಲಿ ಮತ್ತೆ ಪಾಕ್‌ ಕಿರಿಕ್‌: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments