Select Your Language

Notifications

webdunia
webdunia
webdunia
webdunia

ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ!

ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ!
ಭೋಪಾಲ್ , ಸೋಮವಾರ, 17 ಜುಲೈ 2023 (10:53 IST)
ಭೋಪಾಲ್ : ಮಧ್ಯ ಪ್ರದೇಶದ ದತಿಯಾ ಜಿಲ್ಲೆಯಲ್ಲಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ತಂಗಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಪೈಕಿ ಮಧ್ಯಪ್ರದೇಶ ಬಿಜೆಪಿ ನಾಯಕನ ಮಗನೂ ಸೇರಿದ್ದಾನೆ ಎಂದು ವರದಿಗಳು ತಿಳಿಸಿವೆ.
 
ಘಟನೆಯ ಬಳಿಕ ಸಂತ್ರಸ್ತೆ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದು, ಆಕೆಯನ್ನು ಆ ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳೆಲ್ಲರೂ ಉನ್ನಾವೋ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಗಳಾಗಿದ್ದು, ಸಂತ್ರಸ್ತರ ಕುಟುಂಬದವರು ಹಾಗೂ ಸ್ಥಳೀಯರು ಆರೋಪಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಈ ಹಿನ್ನೆಲೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಸಂತ್ರಸ್ತ ವಿದ್ಯಾರ್ಥಿನಿಯರು ಅಲ್ಲದೇ ನಾಲ್ವರು ಆರೋಪಿಗಳು ಸಹ ವಿದ್ಯಾರ್ಥಿಗಳಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ದತಿಯಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಶರ್ಮಾ ತಿಳಿಸಿದ್ದಾರೆ. ಅಲ್ಲದೇ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸಂಬಂಧಿತ ಸೆಕ್ಷನ್ಗಳು ಮತ್ತು ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಗ್ರಾಹಕರಿಗೆ ಸಿಹಿ ಸುದ್ದಿ : ಇಂದಿನಿಂದ ಕೆಜಿ ಟೊಮೆಟೋ ದರ ಇಳಿಸಲು ಕೇಂದ್ರ ನಿರ್ಧಾರ