Publish Date: Thu, 15 Feb 2018 (14:01 IST)
Updated Date: Thu, 15 Feb 2018 (14:12 IST)
ರಥ್‌ನಾಳಾ: ಬರ್ತ್ ಡೇ ಪಾರ್ಟಿಗೆ ತೆರಳಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಮೇಲೆ ಆಕೆಯ ನಾಲ್ವರು ಸ್ನೇಹಿತರೇ ಬರ್ಬರವಾಗಿ ಗ್ಯಾಂಗ್ ರೇಪ್ ಎಸಗಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಪಶ್ಚಿಮಬಂಗಾಲದ ರಥ್‌ನಾಳಾದಲ್ಲಿ ನಡೆದಿದೆ.
ತರುಣಿಯನ್ನು ಪ್ರಿಯಕರ ಮಾವನ ಮನೆಗೆ ಬರ್ತ್ ಡೇ ಪಾರ್ಟಿಗೆ ಕರೆದಿದ್ದು, ಅಲ್ಲಿ ತನ್ನ ಇತರ ಸ್ನೇಹಿತರೊಂದಿಗೆ ಸೇರಿ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಈ ವೇಳೆ ಮನೆಯ ಸದಸ್ಯರು ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದರು.
ಆರೋಪಿಗಳು ಕೃತ್ಯ ಎಸಗಿದ ಬಳಿಕ ಆಕೆಯನ್ನು ಹತ್ಯೆಗೈಯಲು ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತ ತರುಣಿಯನ್ನು ಸಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೃತ್ಯ ಎಸಗಿದ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನೋರ್ವನಿಗಾಗಿ ಶೋಧ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ