Publish Date: Mon, 06 Jun 2022 (15:20 IST)
Updated Date: Mon, 06 Jun 2022 (15:39 IST)
ಚಂಡೀಗಢ : ಗರ್ಭಿಣಿ ಮಹಿಳೆ ಮೇಲೆ ಐವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಝೇಲಂ ನಗರದಲ್ಲಿ ನಡೆದಿದೆ.
ಮನೆಗೆ ನುಗ್ಗಿದ ಕಿಡಿಗೇಡಿಗಳು ಮಹಿಳೆಯ ಪತಿ ಮೇಲೆ ಹಲ್ಲೆ ನಡೆಸಿ ದಾರದಿಂದ ಕಟ್ಟಿಹಾಕಿದ್ದಾರೆ. ಬಳಿಕ ಮಗುವಿನ ನಿರೀಕ್ಷೆಯಲ್ಲಿದ್ದ ಸಂತ್ರಸ್ತೆ ಮೇಲೆ ಅತ್ಯಾಚಾರವೆಸಗಿದ್ದಾರೆ.
ನಂತರ ಆಸ್ಪತ್ರೆಗೆ ಭೇಟಿ ನೀಡಿದ ಮಹಿಳೆ ನಡೆದ ಘಟನೆ ಬಗ್ಗೆ ವಿವರಿಸಿದಾಗ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದೀಗ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆಕೆಯ ರಕ್ತದ ಮಾದರಿಗಳನ್ನು ಫೋರೆನ್ಸಿಕ್ ಪರೀಕ್ಷೆಗಾಗಿ ಲಾಹೋರ್ಗೆ ಕಳುಹಿಸಲಾಗಿದೆ.
ಘಟನೆ ಸಂಬಂಧ ತನಿಖೆ ನಡೆಸಲು ಪಂಜಾಬ್ ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದಾರೆ ಮತ್ತು ಆರೋಪಿಗಳಿಗಾಗಿ ಹುಡುಕಾಟ ನಡೆಸಲು ಆರಂಭಿಸಿದ್ದಾರೆ. ಅಲ್ಲದೇ ಈ ಘಟನೆ ಬಗ್ಗೆ ಅಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಐಜಿಪಿ ಪಂಜಾಬ್ ತಿಳಿಸಿದ್ದಾರೆ.