Select Your Language

Notifications

webdunia
webdunia
webdunia
webdunia

ಟ್ಯೂಷನ್ ಹೋಗುತ್ತಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್ ಮಾಡಿದ ಕಾಮುಕರು!

ಟ್ಯೂಷನ್ ಹೋಗುತ್ತಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್ ಮಾಡಿದ ಕಾಮುಕರು!
ಲಕ್ನೋ , ಭಾನುವಾರ, 26 ಡಿಸೆಂಬರ್ 2021 (10:39 IST)
ಲಕ್ನೋ : ಬಾಲಕಿಗೆ ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

10ನೇ ತರಗತಿಯ ವಿದ್ಯಾರ್ಥಿನಿ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ. ಅಪ್ರಾಪ್ತ ಬಾಲಕಿ ಟ್ಯೂಷನ್ ತರಗತಿಗೆ ಹೋಗಿದ್ದಳು. ಆ ಸಂದರ್ಭದಲ್ಲಿ ಇಬ್ಬರು ವ್ಯಕ್ತಿಗಳು ಬಂದು ಆಕೆಗೆ ಮಾದಕ ದ್ರವ್ಯ ನೀಡಿದ್ದಾರೆ.

ನಂತರ ಅವಳನ್ನು ಇಬ್ಬರು ವ್ಯಕ್ತಿಗಳು ಸದ್ಪುರ ಗ್ರಾಮದ ಬಳಿ ಇರುವ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅರಣ್ಯದಲ್ಲಿದ್ದ ಮತ್ತಿಬ್ಬರು ಸೇರಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.

ಬಾಲಕಿಯು ಸಂಜೆ ಕಳೆದರೂ ಮನೆಗೆ ಬಾರದಿರುವುದರಿಂದ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಬಾಲಕಿಯ ಪತ್ತೆಗಾಗಿ ಹುಡುಕಾಟ ಪ್ರಾರಂಭಿಸಿದ್ದಾರೆ. ಈ ವೇಳೆ ಬಾಲಕಿಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ನಂತರ ಬಾಲಕಿಗೆ ಚಿಕಿತ್ಸೆ ನೀಡಿದ್ದಾರೆ. ಪ್ರಜ್ಞೆ ಬಂದ ನಂತರ ಬಾಲಕಿಯು ಕುಟುಂಬಸ್ಥರಿಗೆ ಈ ವಿಷಯ ತಿಳಿಸಿದ್ದಾಳೆ. 

ಪ್ರಕರಣ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಸ್ಥಳೀಯ ಜನಸತ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ನಾಲ್ವರ ವಿರುದ್ಧ ದೂರು ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತೆಯ ಮದುವೆಯಾಗಿ ಸಿಕ್ಕಿಬಿದ್ದ ಇಬ್ಬರು ಮಕ್ಕಳ ತಂದೆ