Publish Date: Sat, 18 Dec 2021 (12:31 IST)
Updated Date: Sat, 18 Dec 2021 (14:33 IST)
ಕೋಲ್ಕತ್ತಾ : 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.
ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಮಾರುಕಟ್ಟೆಗೆ ಹೋಗುವಾಗ ಈ ಘಟನೆ ನಡೆದಿದೆ. ಈ ಸಂಬಂಧ ಪರಿಚಯಸ್ತ ಆಟೋ ಚಾಲಕನನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.
ಘಟನೆಯ ದಿನ, ವಿದ್ಯಾರ್ಥಿನಿ ಮಾರುಕಟ್ಟೆಗೆ ನಡೆದುಕೊಂಡು ಹೋಗುತ್ತಿರುವುದನ್ನು ನೋಡಿದ ಆಟೋ ಚಾಲಕ ಅವಳನ್ನು ಮಾರುಕಟ್ಟೆಗೆ ಬಿಡುತ್ತೇನೆ ಎಂದು ನಂಬಿಸಿದ್ದಾನೆ. ನಂತರ ದಾರಿಯಲ್ಲಿ ಆಟೋದ ಮೇಲೆ ಇನ್ನೊಬ್ಬ ವ್ಯಕ್ತಿ ಹತ್ತಿದ್ದಾನೆ.
ಇಬ್ಬರು ವ್ಯಕ್ತಿಗಳು ಬಾಲಕಿಯನ್ನು ಮಾರುಕಟ್ಟೆಗೆ ಕರೆತರುವ ಬದಲು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಈ ಇಬ್ಬರು ವ್ಯಕ್ತಿಗಳು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ನಂತರ ಇಬ್ಬರು ಆರೋಪಿಗಳು ಬಾಲಕಿಯನ್ನು ಸ್ಥಳದಲ್ಲೇ ಬಿಟ್ಟು ಓಡಿಹೋಗಿದ್ದಾರೆ. ಘಟನೆ ಕುರಿತು ಬಾಲಕಿಯು ಪೋಷಕರಿಗೆ ಮಾಹಿತಿ ನೀಡಿದ್ದಾರೆ.