Webdunia - Bharat's app for daily news and videos

Install App

ಮತ್ತೇರಿಸುವ ಪದಾರ್ಥ ನೀಡಿ ಯುವತಿಯ ಮೇಲೆ ಗ್ಯಾಂಗ್‌ರೇಪ್

Webdunia
ಮಂಗಳವಾರ, 14 ನವೆಂಬರ್ 2023 (11:04 IST)
ಸ್ನೇಹಿತ ಮತ್ತು ಆತನ ಗೆಳೆಯರೊಂದಿಗೆ ಯುವತಿ ಕಾರ್‌ನಲ್ಲಿ ಸುತ್ತಾಡಲು ಹೋಗಿದ್ದಳು. ದಾರಿ ಮಧ್ಯ ಆರೋಪಿಗಳು ಆಕೆಗೆ ತಂಪು ಪಾನೀಯಗಳನ್ನು ನೀಡಿದರು. ಅದನ್ನು ಕುಡಿದ ಯುವತಿ ತಕ್ಷಣ ಪ್ರಜ್ಞೆ ಕಳೆದುಕೊಂಡಿದ್ದಾಳೆ. ಆಗ 3 ಜನ ಯುವಕರು ಆಕೆಯ ಮೇಲೆ ಗ್ಯಾಂಗ್‌ರೇಪ್ ಎಸಗಿದ್ದಾರೆ ಎಂದು ಹಿರಿಯ ಪೋಲಿಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 
 
23 ವರ್ಷದ ಯುವತಿಯೊಬ್ಬಳನ್ನು ಆಕೆಯ  ಸ್ನೇಹಿತ ಮತ್ತು ಆತನ ಇಬ್ಬರು ಸ್ನೇಹಿತರು ಸೇರಿ  ಚಲಿಸುವ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ  ದಕ್ಷಿಣ ಮಣಿಪುರದಲ್ಲಿ  ವರದಿಯಾಗಿದೆ. ಈ ಭೀಕರ ಕುಕೃತ್ಯವನ್ನು  ನಡೆಸಿದ ನಂತರ ಆಕೆಯನ್ನವರು ರಸ್ತೆ ಬದಿಯಲ್ಲಿ ಎಸೆದು ಹೋಗಿದ್ದಾರೆ. 
 
ಮಣಿಪುರದ ಪೋಲಿಸ್ ಇಲಾಖೆಯಲ್ಲಿ ಮಹಿಳಾ ಪೇದೆಯಾಗಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯ ಮಗಳಾಗಿರುವ ಪೀಡಿತೆಗೆ ಮತ್ತೇರಿಸುವ ಪದಾರ್ಥಗಳನ್ನು ಬೆರೆಸಿದ ತಂಪು ಪಾನೀಯಗಳನ್ನು ಕುಡಿಸಿ ಈ ಕೃತ್ಯ ಎಸಗಲಾಗಿದೆ ಎಂದು ಪೋಲಿಸ್ ಅಧಿಕಾರಿಗಳು ತಿಳಿಸಿದ್ದಾರೆ. 
 
ರಸ್ತೆ ಮಧ್ಯೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಯುವತಿಯನ್ನು ಕಂಡ ಆಟೋ ಚಾಲಕನೊಬ್ಬ ಪೋಲಿಸರಿಗೆ ಮಾಹಿತಿ ನೀಡಿದ್ದಾನೆ. ತಕ್ಷಣ ಸ್ಥಳಕ್ಕಾಗಮಿಸಿದ ಪೋಲಿಸರು ಆಕೆಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. 
 
ನೊಂದ ಯುವತಿ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ಇಬ್ಬರನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments