ಮಹಿಳೆಯ ಮೇಲೆ ಸಾಮೂಹಿಕ ಮಾನಭಂಗ ಎಸಗಿದ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. ಮಹಿಳೆ ಮತ್ತು ಪತಿ ತಡರಾತ್ರಿ ಮಾರುಕಟ್ಟೆಯಿಂದ ಮರಳುತ್ತಿದ್ದಾಗ ದಾರಿಯಲ್ಲಿ ಅವರನ್ನು ತಡೆದು ಪತಿಯನ್ನು ಒತ್ತಾಯಾಳಾಗಿಟ್ಟುಕೊಂಡು ಆಕೆಯ ಮೇಲೆ ಗ್ಯಾಂಗ್‌ರೇಪ್ ಎಸಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆದಿವಾಸಿ ಮಹಿಳೆಯೊಬ್ಬಳು ಪೊಲೀಸರನ್ನು ಸಂಪರ್ಕಿಸಿ ಅತ್ಯಾಚಾರಕ್ಕೊಳಗಾದ ಬಗ್ಗೆ ಆರೋಪಿಸಿ ದೂರು ನೀಡಿದ್ದು, ಮಹಿಳೆಯ ಹೇಳಿಕೆ ಅಸಮಂಜಸವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ತನ್ನ ಪತಿಯ ಜೊತೆ ಮಾರುಕಟ್ಟೆಯಿಂದ ಮರಳುತ್ತಿದ್ದಾಗ ಪತಿಯನ್ನು ಒತ್ತೆಯಾಳಾಗಿ ಇಟ್ಟುಕೊಂಡು ತನ್ನ ಮೇಲೆ ಸಾಮೂಹಿಕ ಮಾನಭಂಗ ಎಸಗಿದ್ದಾರೆ ಎಂದು ಮಹಿಳೆ ಹೇಳಿದ್ದಳು. ಆದರೆ ಈ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಮಹಿಳೆ ಭತ್ತ ಕೊಯ್ಲಿಗೆ ಸಹಾಯ ಮಾಡಲು ಪತಿ ಮತ್ತು ಮಕ್ಕಳ ಜೊತೆ ತನ್ನ ಹೆತ್ತವರ ಮನೆಗೆ ಬಂದಿದ್ದಳು ಎಂಬುದಾಗಿ ತಿಳಿದುಬಂದಿದೆ.
ಈ ಹಿನ್ನಲೆಯಲ್ಲಿ ಮಹಿಳೆ ನಿರಂತರವಾಗಿ ತನ್ನ ಹೇಳಿಕೆಗಳನ್ನು ಬದಲಾಯಿಸುತ್ತಿದ್ದ ಕಾರಣ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ ಎನ್ನಲಾಗಿದೆ. ಹಾಗೇ ಮಹಿಳೆಯ ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಆಕೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿಗಳ ಹುಡುಕಾಟದಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.