Select Your Language

Notifications

webdunia
webdunia
webdunia
webdunia

500 ರೂ.ಗೆ ಗ್ಯಾಸ್ ಸಿಲಿಂಡರ್, ಕೃಷಿ ಸಾಲ ಮನ್ನಾ : ಕಾಂಗ್ರೆಸ್

500 ರೂ.ಗೆ ಗ್ಯಾಸ್ ಸಿಲಿಂಡರ್, ಕೃಷಿ ಸಾಲ ಮನ್ನಾ : ಕಾಂಗ್ರೆಸ್
ಭೋಪಾಲ್ , ಮಂಗಳವಾರ, 23 ಮೇ 2023 (13:06 IST)
ಭೋಪಾಲ್ : ಕರ್ನಾಟಕ ರಾಜ್ಯದಲ್ಲಿ 200 ಯೂನಿಟ್ ವಿದ್ಯುತ್ ಉಚಿತ, ಬಡ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಉಚಿತ, ಮನೆಯೊಡತಿಗೆ 2,000 ರೂ. ಕರ್ನಾಟಕದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಾಗೂ ಯುವನಿಧಿ ಕಾರ್ಯಕ್ರಮದ ಅಡಿಯಲ್ಲಿ ಎರಡು ವರ್ಷಗಳವರೆಗೆ ನಿರುದ್ಯೋಗ ಭತ್ಯೆ,

ಪದವೀಧರರಿಗೆ ತಿಂಗಳಿಗೆ 3,000 ರೂ. ಮತ್ತು ಡಿಪ್ಲೋಮಾ ಮಾಡಿದವರಿಗೆ ತಿಂಗಳಿಗೆ 1,500 ರೂ. ಗ್ಯಾರಂಟಿಗಳನ್ನ ಘೋಷಣೆ ಮಾಡಿರುವ ರಾಷ್ಟ್ರೀಯ ಕಾಂಗ್ರೆಸ್ ಇದೀಗ ಮಧ್ಯ ಪ್ರದೇಶದಲ್ಲಿಯೂ ಗ್ಯಾರಂಟಿಗಳನ್ನ ಘೋಷಣೆ ಮಾಡಿದೆ.

ಇದೇ ವರ್ಷ ಮಧ್ಯಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ರಾಷ್ಟ್ರೀಯ ಕಾಂಗ್ರೆಸ್ನಲ್ಲಿಯೂ ಜಯಭೇರಿ ಬಾರಿಸಲು ಎದುರು ನೋಡುತ್ತಿದೆ. ಈ ಹಿನ್ನೆಲೆಯಲ್ಲಿ 500 ರೂ.ಗಳಿಗೆ ಎಲ್ಪಿಜಿ, ಕೃಷಿ ಸಾಲ ಮನ್ನಾ ಸೇರಿದಂತೆ ಅಲ್ಲಿಯೂ 5 ಗ್ಯಾರಂಟಿಗಳನ್ನ ಘೋಷಣೆ ಮಾಡಿದೆ. 

500 ರೂ.ಗೆ ಗ್ಯಾಸ್ ಸಿಲಿಂಡರ್, ಪ್ರತಿ ಮಹಿಳೆಗೆ 1,500 ರೂ., 100 ಯೂನಿಟ್ ವಿದ್ಯುತ್ ಉಚಿತ, 200 ಯೂನಿಟ್ ಬಿಲ್ ಬಂದ್ರೆ ಅರ್ಧ ಹಣ ಕಟ್ಟಬೇಕು. ಕೃಷಿ ಸಾಲ ಮನ್ನಾ ಮಾಡಲಾಗುವುದು ಹಾಗೂ ಹಳೆಯ ಪಿಂಚಣಿ ಯೋಜನೆ ಜಾರಿ ಮಾಡಲಾಗುವುದು ಎಂದು ಭರವಸೆ ನೀಡಿದೆ. 

ಹಿರಿಯ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಜೂನ್ 12 ರಂದು ನರ್ಮದಾ ನದಿಗೆ ಪ್ರಾರ್ಥನೆ ಸಲ್ಲಿಸಿದ ನಂತರ ಜಬಲ್ಪುರದಲ್ಲಿ ರೋಡ್ ಶೋ ಮತ್ತು ರ್ಯಾಲಿಯೊಂದಿಗೆ ಮಧ್ಯಪ್ರದೇಶದಲ್ಲಿ ಪಕ್ಷದ ಚುನಾವಣಾ ಪ್ರಚಾರ ಪ್ರಾರಂಭಿಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಸ್‌ಎಸ್‌ಎಲ್ಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ