Webdunia - Bharat's app for daily news and videos

Install App

ಲೂಧಿಯಾನ ಫ್ಯಾಕ್ಟರಿಯಲ್ಲಿ ಗ್ಯಾಸ್ ಲೀಕ್ : 9 ಮಂದಿ ಸಾವು!

Webdunia
ಭಾನುವಾರ, 30 ಏಪ್ರಿಲ್ 2023 (11:21 IST)
ಚಂಡೀಗಢ : ಕಾರ್ಖಾನೆಯೊಂದರಲ್ಲಿ  ವಿಷ ಅನಿಲ ಸೋರಿಕೆಯಾದ ಪರಿಣಾಮ 9 ಜನರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಪಂಜಾಬ್ನ ಲೂಧಿಯಾನದಲ್ಲಿ ಭಾನುವಾರ ನಡೆದಿದೆ.

ಲೂಧಿಯಾನದ ಶೇರ್ಪುರ್ ಚೌಕ್ ಬಳಿಯ ಸುವಾ ರಸ್ತೆಯಲ್ಲಿರುವ ಕಾರ್ಖಾನೆಯೊಂದರಲ್ಲಿ ಅನಿಲ ಸೋರಿಕೆಯಾಗಿದೆ. ಭಾನುವಾರ ಬೆಳಗ್ಗೆ 7:15ರ ವೇಳೆಗೆ ಅನಿಲ ಸೋರಿಕೆಯಾಗಿರುವುದು ಗಮನಕ್ಕೆ ಬಂದಿದೆ.

ಘಟನೆಯಲ್ಲಿ 9 ಜನರು ಸಾವನ್ನಪ್ಪಿದ್ದು ಹತ್ತಾರು ಜನರು ವಿಷ ಅನಿಲ ಸೇವಿಸಿ ಅಸ್ವಸ್ಥರಾಗಿದ್ದಾರೆ. ಕಾರ್ಖಾನೆಯಲ್ಲಿ ಇನ್ನೂ ಅನೇಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ವರದಿಗಳ ಪ್ರಕಾರ ಡೈರಿ ಉತ್ಪನ್ನಗಳನ್ನು ಉತ್ಪಾದಿಸುವ ಕಾರ್ಖಾನೆಯಾದ ಗೋಯಲ್ ಮಿಲ್ಕ್ ಪ್ಲಾಂಟ್ನ ಕೂಲಿಂಗ್ ಸಿಸ್ಟಮ್ನಿಂದ ಅನಿಲ ಸೋರಿಕೆಯಾಗಿದೆ. ಇದರಿಂದ ಸಮೀಪದ ನಿವಾಸಿಗಳು ತಮ್ಮ ಮನೆಗಳಲ್ಲಿಯೇ ಮೂರ್ಛೆ ಹೋಗಿದ್ದಾರೆ. ಅನಿಲ ಸೋರಿಕೆ ವಿಚಾರ ಬೆಳಕಿಗೆ ಬರುತ್ತಲೇ ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿದ್ದು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments