Select Your Language

Notifications

webdunia
webdunia
webdunia
webdunia

ಶಾಲೆಯ ಬಳಿ ಗ್ಯಾಸ್ ಲೀಕ್ : ಹಲವು ಮಕ್ಕಳು ಅಸ್ವಸ್ಥ

ಶಾಲೆಯ ಬಳಿ ಗ್ಯಾಸ್ ಲೀಕ್ : ಹಲವು ಮಕ್ಕಳು ಅಸ್ವಸ್ಥ
ಚಂಡೀಗಢ , ಗುರುವಾರ, 11 ಮೇ 2023 (18:24 IST)
ಚಂಡೀಗಢ : ಶಾಲೆಯೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಹಲವಾರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪ್ರಜ್ಞಾಹೀನರಾದ ಘಟನೆ ಪಂಜಾಬ್ನಲ್ಲಿ ಗುರುವಾರ ನಡೆದಿದೆ.
 
ಅಸ್ವಸ್ಥಗೊಂಡ ಮಕ್ಕಳು ಹಾಗೂ ಶಿಕ್ಷಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಶಾಲೆಯನ್ನು ಮುಚ್ಚಲಾಗಿದ್ದು, ಉಳಿದ ಮಕ್ಕಳು ಹಾಗೂ ಸಿಬ್ಬಂದಿಯನ್ನು ಪೊಲೀಸರು ಬೇರೆಡೆಗೆ ಸ್ಥಳಾಂತರಿಸಿದ್ದಾರೆ.

ಘಟನೆಗೆ ಕಾರಣವೇನೆಂದು ಪರಿಶೀಲನೆ ನಡೆಸಲಾಗುತ್ತಿದೆ. ಶಾಲೆಯ ಸಮೀಪದಲ್ಲಿರುವ ಎರಡು ದೊಡ್ಡ ಕೈಗಾರಿಕಾ ಘಟಕಗಳು ಅನಿಲ ಸೋರಿಕೆಯ ಮೂಲಗಳೆಂದು ಶಂಕಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಸ್ಥಳದಲ್ಲಿ ಯಾವುದೇ ಅನಾಹುತಗಳು ನಡೆಯದಂತೆ ಸೂಕ್ತ ಕ್ರಮಕೈಗೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ಅಂಬುಲೆನ್ಸ್ಗಳನ್ನು ಘಟನಾ ಸ್ಥಳದಲ್ಲಿ ಇರಿಸಲಾಗಿದೆ ಎಂದು ಪಂಜಾಬ್ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಟ್ವಿಟ್ಟರ್ನಲ್ಲಿ ತಿಳಿಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ವಿಚ್ಛೇದನ ಘೋಷಿಸಿ, ಸ್ನೇಹಿತರಾಗಿ ಇರ್ತೀವಿ ಅಂದ ನಿರ್ಗಮಿತ ಪ್ರಧಾನಿ ಸನ್ನಾ ಮರಿನ್‌