Select Your Language

Notifications

webdunia
webdunia
webdunia
webdunia

ಗೌರಿ ಲಂಕೇಶ್ ಕೇಸ್ ಸಿಬಿಐ ತನಿಖೆಗೆ ವಹಿಸಲು ಸರಕಾರ ಚರ್ಚೆ

ಗೌರಿ ಲಂಕೇಶ್ ಕೇಸ್ ಸಿಬಿಐ ತನಿಖೆಗೆ ವಹಿಸಲು ಸರಕಾರ ಚರ್ಚೆ
ಬೆಂಗಳೂರು , ಬುಧವಾರ, 6 ಸೆಪ್ಟಂಬರ್ 2017 (12:23 IST)
ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವ ಕುರಿತಂತೆ ಗಂಭೀರ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದು, ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಕುರಿತಂತೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಉಪಸ್ಥಿತರಿದ್ದ ಗೃಹ ಸಚಿವ ರಾಮಲಿಂಗಾರೆಡ್ಡಿ ಕೂಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಕುರಿತಂತೆ ಒಲವು ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ಗೌರಿ ಲಂಕೇಶ್ ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಲು ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಸ್ಥಳೀಯರಿಂದ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ರಾಜ್ಯದ ಪೊಲೀಸ್ ಮಹಾನಿರ್ದೇಶಕ ಆರ್‌.ಕೆ.ದತ್ತಾ ಅವರಿಗೆ ಅಗತ್ಯವಾದಲ್ಲಿ ಹೆಚ್ಚಿನ ತಂಡಗಳನ್ನು ರಚಿಸಿ ತನಿಖೆ ನಡೆಸಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವಂತೆ ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಗೌರಿ ಲಂಕೇಶ್ ಹತ್ಯೆ: ಫೇಸ್ಬುಕ್`ನಲ್ಲಿ ಅಪಹಾಸ್ಯ ಪೋಸ್ಟ್, ಲೈಕ್ ಮಾಡಿದ್ದವರು ಅರೆಸ್ಟ್..!