ಐಟಿ ದಾಳಿಗೊಳಗಾದ ಬೆನ್ನಲ್ಲೇ ಪಿ. ರಾಮ್ ಮೋಹನ್ ರಾವ್ ಅವರಿಗೆ ತಮಿಳುನಾಡಿನ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಗೇಟ್ ಪಾಸ್ ನೀಡಲಾಗಿದ್ದು ಅವರ ಜಾಗಕ್ಕೆ ಡಾಕ್ಟರ್ ಗಿರಿಜಾ ವೈದ್ಯನಾಥನ್ ಅವರನ್ನು ನೇಮಿಸಲಾಗಿದೆ.
ನಿನ್ನೆ ರಾಮ್ ಮೋಹನ್ ಮನೆ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಅಧಿಕಾರಿಗಳು ಅಪಾರ ಪ್ರಮಾಣದ ಹಣ ಮತ್ತು ನಗದನ್ನು ವಶಪಡಿಸಿಕೊಂಡಿದ್ದರು. ಅವರ ಮೇಲೆ ಭ್ರಷ್ಟಾಚಾರದ ಆರೋಪ ಬರುತ್ತಿದ್ದಂತೆ ತಮಿಳುನಾಡು ಸರ್ಕಾರ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ಕೆಳಗಿಳಿಸಿದೆ. ಅವರಿಗೆ ಮತ್ಯಾವುದೇ ಹುದ್ದೆಯನ್ನು ನೀಡಲಾಗಿಲ್ಲ ಎಂದು ತಿಳಿದು ಬಂದಿದೆ.
ಹಿರಿಯ ಐಎಎಸ್ ಅಧಿಕಾರಿಯಾಗಿರುವ ಗಿರಿಜಾ ಇದುವರೆಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಜಮೀನು ಆಡಳಿತ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಮುಖ್ಯ ಕಾರ್ಯದರ್ಶಿ ಅಧಿಕಾರದ ಜತೆ ಜಾಗೃತ ಆಯುಕ್ತ ಮತ್ತು ಆಡಳಿತಾತ್ಮಕ ಸುಧಾರಣೆಗಳ ಆಯುಕ್ತರಾಗಿ ಸಹ ಅವರು ಕಾರ್ಯ ನಿರ್ವಹಿಸಲಿದ್ದಾರೆ.
1981ರ ಬ್ಯಾಚ್‌ನ ಐಎಎಸ್ ಅಧಿಕಾರಿ ಗಿರಿಜಾ ಅವರು ಇನ್ನೆರುಡುವರೆ ವರ್ಷಗಳಲ್ಲಿ ನಿವೃತ್ತಿಯಾಗಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ