ಲಕ್ನೋ: ನೆರೆಮನೆಯವನ ಕಾಟ ತಾಳಲಾಗದೇ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಶರಣಾದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.
ಆರನೇ ತರಗತಿಯಲ್ಲಿ ಓದುತ್ತಿದ್ದ 14 ವರ್ಷದ ಅಪ್ರಾಪ್ತೆ ಆತ್ಮಹತ್ಯೆಗೆ ಶರಣಾದವಳು. ಕಳೆದ ಆರು ತಿಂಗಳಿನಿಂದ ನೆರೆಮನೆಯ ಯುವಕ ಈಕೆಯನ್ನು ಹಿಂಬಾಲಿಸಿ ಕಾಟ ಕೊಡುತ್ತಿದ್ದ ಎನ್ನಲಾಗಿದೆ.
ಈ ಸಂಬಂಧ ಇದೀಗ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ. ಆದರೆ ಬಾಲಕಿಯ ಮನೆಯವರು ಇನ್ನೂ ಈ ಬಗ್ಗೆ ದೂರು ನೀಡಿಲ್ಲ ಎನ್ನಲಾಗಿದೆ.