ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರತಿನಿಧಿಸುವ ಉತ್ತರ ಪ್ರದೇಶದ ಅಮೇಥಿಯ ಹಳ್ಳಿಯೊಂದರಲ್ಲಿ ಬಾಲಕಿಯೊಬ್ಬಳ ಮೇಲೆ ಮೂವರು ಕೀಚಕರು ಸಾಮೂಹಿಕ ಅತ್ಯಾಚಾರವನ್ನೆಸಗಿದ್ದು ಅಸ್ವಸ್ಥಗೊಂಡಿದ್ದ ಬಾಲಕಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.
ಭಾನುವಾರ ಸಂಜೆ ಬಾಲಕಿ ಹೊಲದಲ್ಲಿ ನೀರುಣಿಸುತ್ತಿದ್ದಾಗ ಅಲ್ಲಿಗೆ ಬಂದ ಮೂವರು ದುರುಳರು ಆಕೆಯ ಮೇಲೆ ದೌರ್ಜನ್ಯವನ್ನೆಸಗಿದ್ದರು.
ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಸಿಎಚ್‌ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವಳನ್ನು ಸುಲ್ತಾನಪುರ ಜಿಲ್ಲಾಸ್ಪತ್ರೆಗೆ ಸಾಗಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸೋಮವಾರ ಮುಂಜಾನೆ ಸಾವನ್ನಪ್ಪಿದ್ದಾಳೆ.
ಈ ಕುರಿತು ಪಿಪಾರ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊನೆಯುಸಿರೆಳೆಯುವ ಮುನ್ನ ಬಾಲಕಿ ನೀಡಿದ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ದಾಖಲಿಸಿಕೊಂಡಿದ್ದಾರೆ.
ಬಾಲಕಿ ಸಾವಿನ ಸುದ್ದಿ ಕೇಳಿದ ಸ್ಥಳೀಯರು ರಸ್ತೆಗಿಳಿದು ಪ್ರತಿಭಟನೆಯನ್ನು ಕೈಗೊಂಡರು. ಬಳಿಕವಷ್ಟೇ ಪಿರ್ಪಾಪುರ ಪೊಲೀಸರು ಮೂವರು ಆರೋಪಿಗಳ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ