Publish Date: Wed, 23 Feb 2022 (15:09 IST)
Updated Date: Wed, 23 Feb 2022 (20:15 IST)
ಗಾಂಧೀನಗರ : 11 ವರ್ಷದ ಬಾಲಕಿಯ ಮೇಲೆ ಭಾನುವಾರ ಸಂಜೆ ಅತ್ಯಾಚಾರ ಎಸಗಿ ಹತ್ಯೆಗೈದಿರುವ ಘಟನೆ ಸೂರತ್ ಜಿಲ್ಲೆಯಲ್ಲಿ ನಡೆದಿದೆ.
ಸೂರತ್ ಜಿಲ್ಲೆಯ ಜೋಲ್ವಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆಯ ತಾಯಿ ಅನುಮಾನಗೊಂಡಿದ್ದ ಇಬ್ಬರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಬಾಲಕಿಯರ ಪೋಷಕರು ದಿನಗೂಲಿ ಕಾರ್ಮಿಕರಾಗಿದ್ದು, ತಮ್ಮ ಮಗಳು ಕಾಣೆಯಾಗಿರುವುದನ್ನು ತಿಳಿದು ಹುಡುಕಾಟ ನಡೆಸಿದ್ದಾರೆ. ಈ ವೇಳೆ ತಮ್ಮ ಮನೆಯ ಸಮೀಪದಲ್ಲಿರುವ ಕಟ್ಟಡದ ಕೊಠಡಿಯಲ್ಲಿ ಬಾಲಕಿಯ ಶವ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಪತ್ತೆ ಆಗಿದೆ. ನಂತರ ಆಕೆಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದರು.
ಆದರೆ ಬಾಲಕಿ ಚಿಕಿತ್ಸೆ ಫಲಾಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಇದೀಗ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೂರತ್ನ ಹೊಸ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದೆ.
ಇದೀಗ ಈ ಪ್ರಕರಣ ಕುರಿತಂತೆ ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸೋಮವಾರ ಮಧ್ಯಾಹ್ನ ಸೂರತ್ ರೇಂಜ್ ಐಜಿ ರಾಜ್ಕುಮಾರ್ ಪಾಂಡಿಯನ್ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.