Select Your Language

Notifications

webdunia
webdunia
webdunia
webdunia

ಬಾಲಕಿಯರಿಗೆ ನಶೆ ಪದಾರ್ಥ ನೀಡಿ ರೇಪ್!

ಬಾಲಕಿಯರಿಗೆ ನಶೆ ಪದಾರ್ಥ ನೀಡಿ ರೇಪ್!
ಲಕ್ನೋ , ಮಂಗಳವಾರ, 7 ಡಿಸೆಂಬರ್ 2021 (12:29 IST)
ಲಕ್ನೋ : ಉತ್ತರ ಪ್ರದೇಶದ ಮುಜಾಫರ್ನಗರ ಜಿಲ್ಲೆಯ ಎರಡು ಖಾಸಗಿ ಶಾಲೆಗಳ ಮ್ಯಾನೇಜರ್ಗಳ ವಿರುದ್ಧ 17 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.
ಮಾದಕ ದ್ರವ್ಯ ನೀಡಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂಬ ಆರೋಪ ಕೆಳಿ ಬಂದಿದೆ. ಈ ಸಂಬಂಧ ಪೊಲೀಸರು ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದರೊಂದಿಗೆ ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದ್ದಕ್ಕೆ ಪೊಲೀಸ್ ಅಧಿಕಾರಿಯೊಬ್ಬರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಭಾರತೀಯ ಜನತಾ ಪಕ್ಷದ ಮುಖಂಡ ಮತ್ತು ಸ್ಥಳೀಯ ಶಾಸಕ ಪ್ರಮೋದ್ ಉತ್ವಾಲ್ ಅವರ ಮಧ್ಯಸ್ಥಿಕೆಯ ನಂತರ, ಕುಟುಂಬದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ ಎಂದು ಮುಜಾಫರ್ನಗರ ಜಿಲ್ಲಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಯಾದವ್ ಸೋಮವಾರ ಹೇಳಿದ್ದಾರೆ.
ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಪುರ್ಕಾಜಿ ಪೊಲೀಸ್ ಠಾಣೆಯ ಉಸ್ತುವಾರಿ ವಿನೋದ್ ಕುಮಾರ್ ಸಿಂಗ್ ಅವರನ್ನು ತನಿಖೆಗೊಳಪಡಿಸಲಾಗಿದೆ ಎಂದು ಅವರು ಹೇಳಿದರು.
ಅದೇ ಸಮಯದಲ್ಲಿ, ಭೋಪಾ ಪೊಲೀಸ್ ಠಾಣೆಯಲ್ಲಿರುವ ಸೂರ್ಯ ದೇವ್ ಪಬ್ಲಿಕ್ ಸ್ಕೂಲ್ನ ನಿರ್ವಾಹಕ ಯೋಗೇಶ್ ಕುಮಾರ್ ಚೌಹಾಣ್ ಮತ್ತು ಪುರ್ಕಾಜಿ ಪ್ರದೇಶದ ಜಿಜಿಎಸ್ ಇಂಟರ್ನ್ಯಾಷನಲ್ ಸ್ಕೂಲ್ನ ನಿರ್ವಾಹಕ ಅರ್ಜುನ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಮಾದಕ ದ್ರವ್ಯಗಳನ್ನು ನೀಡಿದ ಸೆಕ್ಷನ್ ಹಾಗೂ  POCSO ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕೇರಳದಿಂದ ಬಂದವರ ಮೇಲೆ ತೀವ್ರ ನಿಗಾ: ಮಾಧುಸ್ವಾಮಿ