Select Your Language

Notifications

webdunia
webdunia
webdunia
webdunia

ಉದ್ಯೋಗದ ಬದಲಿಗೆ ವ ಸಮೂಹಕ್ಕೆ ಡ್ರಗ್ಸ್ ಕೊಡ್ತಿದೆ: ಪ್ರಿಯಾಂಕಾ

ಬಿಜೆಪಿ
ಶಿಮ್ಲಾ , ಮಂಗಳವಾರ, 8 ನವೆಂಬರ್ 2022 (09:08 IST)
ಶಿಮ್ಲಾ : ಯುವ ಸಮೂಹಕ್ಕೆ ಉದ್ಯೋಗದ ಬದಲಾಗಿ ಡ್ರಗ್ಸ್ ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯ ನಿಲುವುಗಳ ಬಗ್ಗೆ ಟೀಕಿಸಿದ್ದಾರೆ. ಬಿಜೆಪಿ ಪರಿಕಲ್ಪನೆಯನ್ನು ಯಾರೂ ಒಪ್ಪುವುದಿಲ್ಲ. ಹಿಮಾಚಲ ಪ್ರದೇಶದ ಜನರು ತಮ್ಮ ಒಳಿತಿಗಾಗಿ ಸರ್ಕಾರವನ್ನು ಬದಲಾಯಿಸಬೇಕಿದೆ ಎಂದು ಕರೆ ನೀಡಿದ್ದಾರೆ.

ಇದೇ ವೇಳೆ ಬಿಜೆಪಿ ಉದ್ಯೋಗ ಸೃಷ್ಟಿಸುವ ಭರವಸೆಗಳ ಕುರಿತು ವಾಗ್ದಾಳಿ ನಡೆಸಿದ ಪ್ರಿಯಾಂಕಾ, ಉದ್ಯೋಗ ಹಕ್ಕನ್ನು ಬೆಂಬಲಿಸುವ ಕಾಂಗ್ರೆಸ್ ಆಡಳಿತ ರಾಜ್ಯಗಳಾದ ಛತ್ತಿಸ್ಗಢ ಹಾಗೂ ರಾಜಸ್ಥಾನವನ್ನು ಉದಾಹರಣೆಯಾಗಿ ನೀಡಿದ್ದಾರೆ. 


Share this Story:

Follow Webdunia kannada

ಮುಂದಿನ ಸುದ್ದಿ

ಟ್ವಿಟ್ಟರ್ ಖಾತೆ ಬ್ಲಾಕ್ ಮಾಡುವಂತೆ ಕೋರ್ಟ್ ಆದೇಶ