Select Your Language

Notifications

webdunia
webdunia
webdunia
webdunia

ಸಿಎಂ ಪರಿಕ್ಕರ್ ಆಸ್ಪತ್ರೆಯಲ್ಲಿರುವಾಗ ಗೋವಾದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಕಸರತ್ತು

ಸಿಎಂ ಪರಿಕ್ಕರ್ ಆಸ್ಪತ್ರೆಯಲ್ಲಿರುವಾಗ ಗೋವಾದಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಕಸರತ್ತು
ಪಣಜಿ , ಸೋಮವಾರ, 17 ಸೆಪ್ಟಂಬರ್ 2018 (15:56 IST)
ಪಣಜಿ: ಗೋವಾ ಸಿಎಂ ಮನೋಹರ್ ಪರಿಕ್ಕರ್ ಅನಾರೋಗ್ಯದಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಇತ್ತ ಕಾಂಗ್ರೆಸ್ ಪಕ್ಷ ಗೋವಾದಲ್ಲಿ ಸರ್ಕಾರ ರಚಿಸಲು ಕಸರತ್ತು ನಡೆಸಿದೆ.

ಬಿಜೆಪಿ ನೇತೃತ್ವದ ಗೋವಾ ಮೈತ್ರಿ ಸರ್ಕಾರ ಸಿಎಂ ಅನಾರೋಗ್ಯದಿಂದಾಗಿ ನಿಷ್ಕ್ರಿಯವಾಗಿದೆ. ಆಡಳಿತ ವ್ಯವಸ್ಥೆ ಸತ್ತು ಹೋಗಿದೆ ಎಂದು 16 ಸದಸ್ಯರ ಕಾಂಗ್ರೆಸ್ ಶಾಸಕರ ನಿಯೋಗ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚಿಸಲು ತಮಗೆ ಆಹ್ವಾನ ನೀಡುವಂತೆ ಮನವಿ ಮಾಡಿದೆ.

ಈ ಸರ್ಕಾರ ಕಾರ್ಯ ನಿರ್ವಹಿಸುತ್ತಿಲ್ಲ. ಹೀಗಾಗಿ ಸರ್ಕಾರವನ್ನು ಬರ್ಖಾಸ್ತುಗೊಳಿಸಿ ನಮಗೆ ಅವಕಾಶ ಕೊಡಿ ಎಂದು ಕಾಂಗ್ರೆಸ್ ಮನವಿ ಮಾಡಿದೆ. ನಾಳೆ ಮತ್ತೊಮ್ಮೆ ರಾಜ್ಯಪಾಲರನ್ನು ಭೇಟಿಯಾಗಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಈ ನಡುವೆ ಬಿಜೆಪಿ ಮಾತ್ರ ಯಾವುದೇ ಕಾರಣಕ್ಕೂ ಪರಿಕ್ಕರ್ ಬದಲಿಗೆ ಬೇರೊಬ್ಬ ನಾಯಕರನ್ನು ಮುಖ್ಯಮಂತ್ರಿಯಾಗಿ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಠಾಣೆ ಮುಂದೆ ಪೊಲೀಸರಿಂದ ಪ್ರತಿಭಟನೆ