Publish Date: Mon, 07 Aug 2017 (07:22 IST)
Updated Date: Mon, 07 Aug 2017 (07:33 IST)
ನವದೆಹಲಿ: ಗೋವಾದ ಕಾಂಗ್ರೆಸ್ ಪಕ್ಷದ ಮಹಿಳಾ ವಿಭಾಗದ ಸದಸ್ಯರು ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಬಳೆ ಕಳುಹಿಸಿಕೊಟ್ಟಿದ್ದಾರೆ!
ಇತ್ತೀಚೆಗೆ ಗುಜರಾತ್ ನಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾರಿನ ಮೇಲೆ ಕಲ್ಲು ತೂರಾಟವಾಗಿತ್ತು. ಇದನ್ನು ಖಂಡಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರಧಾನಿ ಮತ್ತು ಬಿಜೆಪಿ ರಾಷ್ಟ್ರಧ್ಯಕ್ಷರಿಗೆ ಬಳೆ ಕಳುಹಿಸಿಕೊಟ್ಟಿದ್ದಾರೆ.
ನಮ್ಮ ನಾಯಕನ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದವರು, ಪ್ರಧಾನಿ ಮೋದಿ ಮತ್ತು ಅಮಿತಾ ಶಾಗೆ ನಮ್ಮ ಮನೆಯಲ್ಲಿದ್ದ ಬಳೆಗಳನ್ನು ಬಾಕ್ಸ್ ಗಳಲ್ಲಿ ಕಳುಹಿಸಿಕೊಟ್ಟಿದ್ದೇವೆ ಎಂದು ಕೈ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ಓರ್ವ ಬಿಜೆಪಿ ನಾಯಕನನ್ನು ಬಂಧಿಸಲಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ