ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ನಿಜವಾದ ಹೋರಾಟ ನಡೆಯುವುದು ಆಡಳಿತಾರೂಢ ಬಿಜೆಪಿ ಮತ್ತು ಆಪ್ ನಡುವೆ. ಕಾಂಗ್ರೆಸ್‌ಗೆ ಒಂದೇ ಒಂದು ಸೀಟ್ ಗೆಲ್ಲಲು ಸಾಧ್ಯವಾಗುವುದಿಲ್ಲ ಎಂದು ಆಪ್ ರಾಷ್ಟ್ರೀಯ ಸಂಚಾಲಕ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಬಿಜೆಪಿ ಕೇವಲ ಹಣ ಮಾಡಲು ಗೋವಾವನ್ನು ಬಯಸುತ್ತದೆ. ಹೀಗಾಗಿ ದೋವಾದ ಜನರು ಮುಂದಿನ ಚುನಾವಣೆಯಲ್ಲಿ ಪ್ರಾಮಾಣಿಕ ಪಕ್ಷಕ್ಕೆ ಮತ ನೀಡಲಿದ್ದಾರೆ ಎಂದಿದ್ದಾರೆ ಕೇಜ್ರಿವಾಲ್.
ದಕ್ಷಿಣ ಗೋವಾದ ಕ್ಯೂಪೆಮ್ ಗ್ರಾಮದಲ್ಲಿ ಎಸ್‌ಸಿ/ಎಸ್‌ಟಿ ಸಮುದಾಯದವರನ್ನು ಉದ್ದೇಶಿಸಿ ಮಾತನ್ನಾಡುತ್ತಿದ್ದ ಅವರು, ನಾವು ಗೋವಾವನ್ನು ಕಳೆದುಕೊಳ್ಳಲಿದ್ದೇವೆ ಎಂಬ ಭಯ ಹುಟ್ಟಿಕೊಂಡಾಗಿನಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಉತ್ತರಾಖಂಡ, ಉತ್ತರ ಪ್ರದೇಶಗಳಿಗೆ ಹೋಗುವ ಬದಲು ಗೋವಾದಲ್ಲಿ ಸಾರ್ವಜನಿಕ ಸಭೆಯನ್ನು ನಡೆಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ಗೋವಾದಿಂದ ಸಂಪೂರ್ಣವಾಗಿ ನಾಶವಾಗಿದೆ. ಅವರು ಒಂದು ಸ್ಥಾನವನ್ನು ಕೂಡ ಗೆಲ್ಲಲಾರರು. ಗೋವಾದಲ್ಲಿ ನಡೆಯುವುದು ಆಪ್- ಬಿಜೆಪಿ ನೇರ ಹಣಾಹಣಿ ಎಂದ ಅವರು ಕಾಂಗ್ರೆಸ್‌ಗೆ ಮತ ನೀಡುವ ಮೂಲಕ ನಿಮ್ಮ ಮತವನ್ನು ವ್ಯರ್ಥಗೊಳಿಸದಿರಿ ಎಂದು ಜನರಿಗೆ ಕರೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ .