ಭ್ರಷ್ಟಾಚಾರದಲ್ಲಿ ಭಾಗಿಯಾದವರ ಕೈಗಳನ್ನು ಕತ್ತರಿಸಬೇಕು ಎಂದು ಗೋವಾ ವಿಧಾನಸಭೆಯಲ್ಲಿ ಸ್ವತಂತ್ರ ಶಾಸಕ ನರೇಶ್ ಸವಾಲ್ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.
ಒಂದು ವೇಳೆ, ಸರಕಾರ ನಿಜವಾಗಿಯೂ ಭ್ರಷ್ಟಾಚಾರವನ್ನು ನಿರ್ಮೂಲನೆಗೊಳಿಸಲು ಬಯಸಿದಲ್ಲಿ ಭ್ರಷ್ಟಾಚಾರಿಗಳ ಕೈಗಳನ್ನು ಕತ್ತರಿಸಿ ಹಾಕಬೇಕು ಎಂದು ಗುಡುಗಿದ್ದಾರೆ.
ಗೋವಾದಲ್ಲಿರುವ ಬಿಜೆಪಿ ನೇತೃತ್ವದ ಮೈತ್ರಿಕೂಟದ ಸರಕಾರ ಭ್ರಷ್ಟಾಚಾರವನ್ನು ತಡೆಯುವಲ್ಲಿ ನಿಧಾನಗತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಸವಾಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಗೋವಾ ಮುಖ್ಯಮಂತ್ರಿ ಲಕ್ಷ್ಮಿಕಾಂತ್ ಪರ್ಸೇಕರ್, ವಿಧಾನಸಭೆಯಲ್ಲಿ ಯಾವುದೇ ಹೇಳಿಕೆ ನೀಡುವ ಮುನ್ನ ಯೋಚಿಸಿ ಎಂದು ಸಲಹೆ ನೀಡಿದ್ದಾರೆ.
ಭಾರತ ದೇಶದಲ್ಲಿ ಪ್ರಜಾಪ್ರಭುತ್ವವಿದೆ. ಪ್ರಜಾಪ್ರಭುತ್ವದಲ್ಲಿ ಒಂದು ವೇಳೆ ಒಬ್ಬ ವ್ಯಕ್ತಿ ಅಪರಾಧಿಯಾಗಿದ್ದರೂ ಕೂಡಾ ನ್ಯಾಯಾಲಯದಲ್ಲಿ ಆತನ ಅಪರಾಧವನ್ನು ಸಾಬೀತುಪಡಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಪ್ರಜಾಪ್ರಭುತ್ವವಿರುವುದರಿಂದ ಕಳ್ಳರ ಕೈಗಳನ್ನು ಕತ್ತರಿಸಲು ನಮಗೆ ಸಾಧ್ಯವಾಗುವುದಿಲ್ಲ. ಅದನ್ನು ಶಾಸಕ ನರೇಶ್ ಸವಾಲ್ ನೆನಪಿನಲ್ಲಿಟ್ಟುಕೊಂಡಲ್ಲಿ ಒಳ್ಳೆಯದು. ನಮ್ಮ ಸರಕಾರ ಭ್ರಷ್ಟಾಚಾರವನ್ನು ಬೇರುಸಹಿತ ಕಿತ್ತೊಗೆಯಲು ಬದ್ಧವಾಗಿದೆ ಎಂದು ಗೋವಾ ಸಿಎಂ ಲಕ್ಷ್ಮಿಕಾಂತ್ ಪರ್ಸೇಕರ್ ಘೋಷಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.