Select Your Language

Notifications

webdunia
webdunia
webdunia
webdunia

ಗೋಧ್ರಾ ರೈಲು : 8 ದೋಷಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು

ಗೋಧ್ರಾ ರೈಲು : 8 ದೋಷಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು
ಗುಜರಾತ್ , ಶನಿವಾರ, 22 ಏಪ್ರಿಲ್ 2023 (12:15 IST)
ಗುಜರಾತ್ ಹೈಕೋರ್ಟ್ ಇತ್ತೀಚೆಗೆ ಜೀವಾವಧಿ ಶಿಕ್ಷೆಗೆ ಪರಿವರ್ತಿಸಿತ್ತು. ಅವರ ಜಾಮೀನು ಅರ್ಜಿಯನ್ನು ಈಗ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಪ್ರಕರಣದಲ್ಲಿ 11 ಅಪರಾಧಿಗಳಿಗೆ ಮರಣದಂಡನೆ ವಿಧಿಸಿದರೆ, ಇತರೆ 20 ಅಪರಾಧಿಗಳಿಗೆ ವಿಚಾರಣಾ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿತ್ತು. ದೋಷಿಗಳು ರೈಲಿನ ಬೋಗಿಗಳ ಬಾಗಿಲಿಗೆ ಹೊರಗಿನಿಂದ ಚಿಲಕ ಹಾಕಿ ಬೆಂಕಿ ಹಚ್ಚಿದ ಪ್ರಕರಣ ಗಂಭೀರ ಅಪರಾಧವಾಗಿದೆ ಎಂದು ಗುಜರಾತ್ ಸರ್ಕಾರ ಕೋರ್ಟ್ ಗಮನಕ್ಕೆ ತಂದಿತ್ತು.

ಏನಿದು ಪ್ರಕರಣ?

ಫೆಬ್ರವರಿ 27, 2002 ರಂದು ಗುಜರಾತ್ನ ಗೋಧ್ರಾ ರೈಲು ನಿಲ್ದಾಣದಲ್ಲಿ ಸಬರಮತಿ ಎಕ್ಸ್ಪ್ರೆಸ್ನ ಕೆಲವು ಬೋಗಿಗಳನ್ನು ಅಪರಾಧಿಗಳು ಸುಟ್ಟು ಹಾಕಿದ್ದರು. ಈ ಘಟನೆಯಲ್ಲಿ ಕನಿಷ್ಠ 58 ಜನರು ಪ್ರಾಣ ಕಳೆದುಕೊಂಡಿದ್ದರು. ನಂತರ ಈ ಘಟನೆ ಗುಜರಾತ್ನಲ್ಲಿ ದೊಡ್ಡ ಪ್ರಮಾಣದ ಗಲಭೆಗೆ ಕಾರಣವಾಗಿತ್ತು. 2011ರಲ್ಲಿ ಸ್ಥಳೀಯ ನ್ಯಾಯಾಲಯವು 31 ಆರೋಪಿಗಳಿಗೆ ಶಿಕ್ಷೆ ವಿಧಿಸಿ 63 ಜನರನ್ನು ಖುಲಾಸೆಗೊಳಿಸಿತ್ತು.

ನಂತರ ಗುಜರಾತ್ ಹೈಕೋರ್ಟ್ 31 ಆರೋಪಿಗಳನ್ನು ದೋಷಿಗಳೆಂದು ಪರಿಗಣಿಸಿ, ವಿಚಾರಣಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿತ್ತು. ಆದರೆ 11 ಮಂದಿಯ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಿತ್ತು.

ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅಪರಾಧಿಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. 2018 ರಿಂದ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ವಿಚಾರಣೆ ಹಂತದಲ್ಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗೋಧ್ರಾ ರೈಲು ಬೋಗಿ ಸುಟ್ಟ ಪ್ರಕರಣ