Select Your Language

Notifications

webdunia
webdunia
webdunia
webdunia

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಸ್ವಯಂ ಘೋಷಿತ ದೇವಮಾನವ ಅರೆಸ್ಟ್

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಸ್ವಯಂ ಘೋಷಿತ ದೇವಮಾನವ ಅರೆಸ್ಟ್
ಕಾನ್ಪುರ , ಗುರುವಾರ, 7 ಏಪ್ರಿಲ್ 2022 (09:30 IST)
ಕಾನ್ಪುರ: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ದೇವ ಮಾನವ ಮಹಾಮಂಡಲೇಶ್ವರ್ ಪ್ರಖರ್ ಜೀ ಎಂಬಾತನನ್ನು ಬಂಧಿಸಲಾಗಿದೆ.

ಬೆಂಗಳೂರು ಮೂಲದ ಅಪ್ರಾಪ್ತೆ ಮೇಲೆ 2020 ರಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ತನ್ನ ಪೋಷಕರೊಂದಿಗೆ ಉತ್ತರ ಪ್ರದೇಶಕ್ಕೆ ಬಂದಿದ್ದಳು. ಈ ವೇಳೆ ಅಲ್ಲಿಗೆ ಬಂದಿದ್ದ ಆರೋಪಿ ಪೂಜೆ ನೆಪದಲ್ಲಿ ಆಕೆ ಮೇಲೆ ಅತ್ಯಾಚಾರವೆಸಗಿದ್ದ.

ಬಳಿಕ ತನ್ನ ಆಶ್ರಮಕ್ಕೆ ಬಾಲಕಿಯನ್ನು ಕರೆದೊಯ್ದಿದ್ದ. ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ. ತಮ್ಮ ಪುತ್ರಿಯನ್ನು ಮರಳಿಸುವಂತೆ ಆ‍ಶ್ರಮಕ್ಕೆ ಹೋದರೆ ಅಲ್ಲಿನ ಸಿಬ್ಬಂದಿಗಳು ಪೋಷಕರನ್ನು ಹೊರಗೆ ಕಳುಹಿಸಿದ್ದರು. ಬೇರೆ ದಾರಿ ಕಾಣದೇ ಪೋಷಕರು ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಅದರಂತೆ ಇದೀಗ ಆರೋಪಿ ಮೇಲೆ ಕ್ರಮ ಕೈಗೊಳ್ಳಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಪಘಾತದಲ್ಲಿ ಸಾವನ್ನಪ್ಪಿದ್ದ ಮಹಿಳೆಯ ಕುತ್ತಿಗೆಯಿಂದ ಸರ ಕದ್ದ ಪಾಪಿ