Webdunia - Bharat's app for daily news and videos

Install App

ಚಿನ್ನ ಕಳ್ಳಸಾಗಣೆ: ಶಶಿ ತರೂರ್‌ ಆಪ್ತ ಸಹಾಯಕ ವಿಮಾನ ನಿಲ್ದಾಣದಲ್ಲಿ ಅರೆಸ್ಟ್

sampriya
ಗುರುವಾರ, 30 ಮೇ 2024 (14:54 IST)
Photo By X
ನವದೆಹಲಿ: ಚಿನ್ನ ಕಳ್ಳಸಾಗಣೆ ಆರೋಪದಡಿಯಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಮಾಜಿ ಆಪ್ತ ಸಹಾಯಕನನ್ನು ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.‌

ಈ ಸಂಬಂಧ ಬ್ಯಾಂಕಾಕ್‌ನಿಂದ ಇಲ್ಲಿಗೆ ಆಗಮಿಸಿದ ಶಶಿ ತರೂರ್ ಅವರ ಆಪ್ತ ಸಹಾಯಕ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಅಧಿಕಾರಿಗಳು ಬಂಧಿಸಿದ್ದು ಅವರ ವಿರುದ್ಧ ಚಿನ್ನ ಕಳ್ಳಸಾಗಣೆ ಪ್ರಕರಣವನ್ನು ದಾಖಲಿಸಿದ್ದಾರೆ.

ಬಂಧಿತ ವ್ಯಕ್ತಿಯಿಂದ ₹ 35.22 ಲಕ್ಷ ಮೌಲ್ಯದ 500 ಗ್ರಾಂ ತೂಕದ ಚಿನ್ನದ ಸರವನ್ನು ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ವಿಚಾರಣೆ ನಡೆಸಲಾಗುತಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು.

ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಹಿಮಾಚಲ ಪ್ರದೇಶದಲ್ಲಿರುವ ಶಶಿ ತರೂರ್‌ ಅವರು ಈ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಅವರು ನಿವೃತ್ತ ವ್ಯಕ್ತಿಯಾಗಿದ್ದು, ಆಗಾಗ್ಗೆ ಡಯಾಲಿಸಿಸ್‌ ಮಾಡಿಸಿಕೊಳ್ಳುತ್ತಾರೆ. 72 ವರ್ಷ ವಯಸ್ಸಾದರೂ ಸಹಾನೂಭೂತಿಯಿಂದ ಅವರನ್ನು ಉಳಿಸಿಕೊಳ್ಳಲಾಗಿತ್ತು ಎಂದು ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments