Select Your Language

Notifications

webdunia
webdunia
webdunia
webdunia

ಬೆಂಗಳೂರು, ಬೆಳಗಾವಿ ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌, ಪ್ರಹ್ಲಾದ್‌ ಜೋಶಿ ಬೇಡಿಕೆಗೆ ಸ್ಪಂದಿಸಿದ ಕೇಂದ್ರ

ಸಚಿವ ಪ್ರಹ್ಲಾದ್ ಜೋಶಿ

Sampriya

ನವದೆಹಲಿ , ಮಂಗಳವಾರ, 5 ಆಗಸ್ಟ್ 2025 (17:13 IST)
ನವದೆಹಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕೋರಿಕೆಯಂತೆ ಆ.10ರಂದು ಬೆಂಗಳೂರು-ಬೆಳಗಾವಿ ನೂತನ ‘ವಂದೇ ಭಾರತ್’ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ. 

 ಆ.10ರ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಈ ವೇಳೆಯೇ ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. 

ಬೆಂಗಳೂರು– ಬೆಳಗಾವಿ, ನಾಗ್ಪುರದ ಅಜ್ನಿ- ಪೂಣಾ ಹಾಗೂ ಅಮೃತಸರ- ಶ್ರೀ ಮಾತಾ ವೈಷ್ಣವೊ ದೇವಿ ಕಟ್ರಾ ಮಧ್ಯೆ ನೂತನ ವಂದೇ ಭಾರತ್ ರೈಲು ಸಂಚರಿಸಲಿದೆ.

ಸಚಿವ ಪ್ರಹ್ಲಾದ್ ಜೋಶಿ ಕೋರಿಕೆಗೆ ಸ್ಪಂದನೆ: 
ಪ್ರಹ್ಲಾದ್ ಜೋಶಿ ಅವರು ಬೆಂಗಳೂರು-ಬೆಳಗಾವಿ ಮಧ್ಯೆ ನೂತನ ವಂದೇ ಭಾರತ್ ರೈಲು ಸಂಚಾರ ಆರಂಭಿಸಲು ಪ್ರಧಾನಿ ಮೋದಿ ಮತ್ತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಒತ್ತಾಯಿಸಿದ್ದರು. 

ಇದಕ್ಕೆ ಸ್ಪಂದಿಸಿದ ಪ್ರಧಾನಿ ಮೋದಿ ಅವರು ಭಾನುವಾರ ತಾವೇ ಖುದ್ದು ಈ ಹೊಸ ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಬಸ್ ಮುಷ್ಕರ ಹೇಗೆ ನಿಲ್ಲಿಸಬೇಕೆಂದು ನಿಮಗೆ ಗೊತ್ತಿಲ್ವಾ: ಸಿಟಿ ರವಿ