ಗ್ರಾಹಕರಿಗೆ ಗುಡ್‌ನ್ಯೂಸ್‌: ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದಲೇ ಕೊಂಚ ಅಗ್ಗ

Sampriya
ಶನಿವಾರ, 1 ನವೆಂಬರ್ 2025 (15:08 IST)
Photo Credit X
ಮುಂಬೈ:  ನವೆಂಬರ್‌ ತಿಂಗಳ ಮೊದಲ ದಿನವೇ ದೇಶದ ಜನತೆಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. 

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಇಳಿಕೆ ಮಾಡಲಾಗಿದ್ದು, ನವೆಂಬರ್ 1ರಿಂದಲೇ ನೂತನ ದರ ಜಾರಿಗೆ ಬಂದಿದೆ.

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಇಳಿಕೆಯಾಗಿದ್ದು, ಇದರೊಂದಿಗೆ ಹೋಟೆಲ್‌, ರೆಸ್ಟೋರೆಂಟ್‌ ಮತ್ತು ಆಹಾರೋದ್ಯಮ ವಲಯಗಳಿಗೆ ಬಹುದೊಡ್ಡ ನಿರಾಳತೆ ದೊರೆತಂತಾಗಿದೆ. 

19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು ನವೆಂಬರ್ 1 ರಿಂದ ರೂ. 4.5 ರಿಂದ ರೂ. 6.5 ವರೆಗೆ ಇಳಿಸಲಾಗಿದೆ. ಗೃಹ ಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಈ ತಿಂಗಳು ಯಾವುದೇ ಬದಲಾವಣೆ ಆಗಿಲ್ಲ. ಈ ಬೆಲೆಗಳು ಏಪ್ರಿಲ್ 2025 ರಿಂದ ಸ್ಥಿರವಾಗಿಯೇ ಇವೆ.

ಅಕ್ಟೋಬರ್‌ನಲ್ಲಿ ಬೆಲೆ ಏರಿಕೆಯ ನಂತರ ನವೆಂಬರ್‌ನಲ್ಲಿ ಎಲ್‌ಪಿಜಿ ಬೆಲೆ ಕಡಿತವಾಗಿದೆ. ಕಳೆದ ತಿಂಗಳು, ದೆಹಲಿ ಮತ್ತು ಮುಂಬೈನಲ್ಲಿ ತಲಾ 15.5 ರೂ.ಗಳಷ್ಟು ಹೆಚ್ಚಿಸಲಾಗಿತ್ತು. ಇನ್ನು ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ ದರವನ್ನು ತಲಾ 16.5 ರೂ.ಗಳಷ್ಟು ಹೆಚ್ಚಿಸಲಾಗಿತ್ತು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ್ತೊಂದು ಕಾಲ್ತುಳಿತ: ಇತಿಹಾಸ ಪ್ರಸಿದ್ಧ ಕ್ಷೇತ್ರದಲ್ಲಿ ದೇವರದರ್ಶನದ ನೂಕುನುಗ್ಗಲಿನಲ್ಲಿ 9 ಮಂದಿ ಸಾವು

ಮೋದಿ ವಿರುದ್ಧ ಸದಾ ಕೆಂಡಕಾರುತ್ತಿದ್ದ ಸಂಜಯ್ ರಾವತ್ ಗೆ ಏನಾಗಿದೆ ನೋಡಿ: ಗಂಭೀರ ಸಮಸ್ಯೆಯಲ್ಲಿ ನಾಯಕ

ಡೆಡ್‍ಲೈನ್ ಸಾಯುತ್ತಿದೆಯೇ ಹೊರತು ಅಭಿವೃದ್ಧಿ ಆಗುತ್ತಿಲ್ಲ: ಶೋಭಾ ಕರಂದ್ಲಾಜೆ

ಕನ್ನಡ ಅತ್ಯಂತ ಪ್ರಾಚೀನ ಭಾಷೆ: ಶೋಭಾ ಕರಂದ್ಲಾಜೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments