ಮಹಿಳಾ ದಿನಾಚರಣೆಗೆ ಗುಡ್‌ ನ್ಯೂಸ್‌: ಗೃಹಿಣಿಯರ ಖಾತೆಗೆ ಜಮೆಯಾಗುವ ಹಣವೆಷ್ಟು ಗೊತ್ತಾ

Sampriya
ಗುರುವಾರ, 20 ಫೆಬ್ರವರಿ 2025 (14:09 IST)
Photo Courtesy X
ನವದೆಹಲಿ: ದೆಹಲಿಯ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿರುವ  ರೇಖಾ ಗುಪ್ತಾ ಅವರು ಅದಕ್ಕೂ ಮುನ್ನ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಬುಧವಾರ ರೇಖಾ ಗುಪ್ತಾ ಆಯ್ಕೆಯಾಗಿದ್ದರು.

ದೆಹಲಿ ವಿಧಾನಸಭಾ ಚುನಾವಣೆಯ ವೇಳೆ ನೀಡಿದ ಚುನಾವಣೆ ಭರವಸೆಯಂತೆ ಮಹಿಳೆಯರಿಗೆ ಮಾಸಿಕ ₹2,500 ಆರ್ಥಿಕ ನೆರವು ನೀಡುವ ಕುರಿತು ಮಹತ್ವದ ಅಪ್‌ಡೇಟ್‌ ನೀಡಿದ್ದಾರೆ. ಮಾರ್ಚ್‌ 8 ಮಹಿಳಾ ದಿನಾಚರಣೆಯಿದ್ದು, ಅದಕ್ಕೂ ಮುನ್ನವೇ ಮಹಿಳೆಯರ ಖಾತೆಗೆ ಮೊದಲ ಕಂತಿನ ಹಣ ಜಮೆ ಮಾಡುವ ಭರವಸೆ ನೀಡಿದ್ದಾರೆ.  

ರಾಜಧಾಣಿಯ ಚುನಾವಣೆ ಸಂದರ್ಭ ಪ್ರಣಾಳಿಕೆ ಸಂಕಲ್ಪ ಪತ್ರ ಬಿಡುಗಡೆ ಮಾಡಿದ್ದ ಪಕ್ಷದ ರಾಷ್ಟ್ರಿಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು, ಮಹಿಳೆಯರಿಗೆ ಮಾಸಿಕ ₹2,500 ಆರ್ಥಿಕ ನೆರವು, ಗರ್ಭಿಣಿಯರಿಗೆ ₹21,000 ನೆರವು, ಹಿರಿಯ ನಾಗರಿಕರಿಗೆ ₹2,500 ಪಿಂಚಣಿ ಮತ್ತು ಬಡವರಿಗೆ ₹500ಕ್ಕೆ ಅಡುಗೆ ಅನಿಲ ನೀಡುವುದಾಗಿ ಭರವಸೆ ನೀಡಿದ್ದರು. ಅದರಲ್ಲಿ ಮೊದಲ ಘೋಷಣೆ ಅನುಷ್ಠಾನಕ್ಕೆ ಸಿದ್ಧತೆ ನಡೆಸಿದೆ.

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಪಕ್ಷವು 48 ಸ್ಥಾನಗಳನ್ನು ಅಧಿಕಾರ ಪಡೆದಿದೆ. ಆಡಳಿತರೂಢ ಆಮ್‌ ಆದ್ಮಿ ಪಕ್ಷ 22 ಸ್ಥಾನಗಳನ್ನು ಪಡೆಯಲಷ್ಟೇ ಶಕ್ತವಾಗಿದೆ.

 ನರೇಂದ್ರ ಮೋದಿ ಅವರ ಕನಸನ್ನು ನನಸು ಮಾಡುವುದು ದೆಹಲಿಯ ಎಲ್ಲಾ 48 ಬಿಜೆಪಿ ಶಾಸಕರ ಜವಾಬ್ದಾರಿಯಾಗಿದೆ. ಮಹಿಳೆಯರಿಗೆ ಆರ್ಥಿಕ ನೆರವು ಸೇರಿದಂತೆ ನಮ್ಮ ಎಲ್ಲಾ ಭರವಸೆಗಳನ್ನು ನಾವು ಖಂಡಿತವಾಗಿಯೂ ಈಡೇರಿಸುತ್ತೇವೆ ಎಂದು ಅವರು ಹೇಳಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments