ಆಮ್ ಆದ್ಮಿ ಪಕ್ಷದ ಸರಕಾರ ಸೋಲಾರ್ ನೀತಿಯನ್ನು ಜಾರಿಗೊಳಿಸಿದ್ದು, ಸರಕಾರಿ ಮತ್ತು ಖಾಸಗಿ ಸಂಸ್ಥೆಗಳು ಕಡ್ಡಾಯವಾಗಿ ಸೋಲಾರ್ ಪ್ಯಾನೆಲ್‌ಗಳನ್ನು ಅಳವಡಿಸಬೇಕು ಎಂದು ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೋಲಾರ್ ನೀತಿಯನ್ನು ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗಿದ್ದು ಮುಂಬರುವ 2020ರ ವೇಳೆಗೆ 1000 ಮೆಗಾವ್ಯಾಟ್, 2025ರ ವೇಳೆಗೆ 2 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.
ಸೋಲಾರ್ ಉಪಕರಣಗಳನ್ನು ಖರೀದಿಸುವವರಿಗೆ ತೆರಿಗೆ ವಿನಾಯಿತಿ ಸೇರಿದಂತೆ ಹಲವು ವಿನಾಯಿತಿಗಳನ್ನು ಸರಕಾರ ಘೋಷಿಸಿದೆ.
ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ಪರವಾನಿಗಿ ನೀಡಿದ ವಿಮಾನ ನಿಲ್ದಾಣಗಳ ಬಳಿಯಿರುವ ಕಟ್ಟಡಗಳಿಗೆ ಸೋಲಾರ್ ನಿಯಮ ಅನ್ವಯಿಸುವುದಿಲ್ಲ ಎಂದು ಹೇಳಿದ್ದಾರೆ.
ಕಟ್ಟಡಗಳ ಮೇಲೆ ಸೋಲಾರ್ ಪ್ಯಾನೆಲ್ ಅಳವಡಿಸಲು ನಗರಸಭೆಯ ಅಥವಾ ನಗರಾಭಿವೃದ್ಧಿ ಇಲಾಖೆಯ ಅನುಮತಿ ಅಗತ್ಯವಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.