ಹಣಕಾಸು ಸೇವಾ ಆಯೋಗದಿಂದ ಪರವಾನಗಿ ಪಡೆದ ಎಲ್ಲಾ ಜಾಗತಿಕ ವ್ಯಾಪಾರ ಕಂಪನಿಗಳು ಎಲ್ಲಾ ಅವಶ್ಯಕತೆಗಳನ್ನು ಪೂರೈಸಬೇಕು ಮತ್ತು ಆಯೋಗವು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಉತ್ತರಿಸಿದ್ದಾರೆ.
ಹಿಂಡೆನ್ಬರ್ಗ್ ಆರೋಪ ಸುಳ್ಳು ಮತ್ತು ಆಧಾರ ರಹಿತ ಎಂದು ಹೇಗೆ ತೀರ್ಮಾನಕ್ಕೆ ಬರಲಾಯಿತು ಎಂದು ಕೇಳಿದ ಪ್ರಶ್ನೆಗೆ, ಮಾರಿಷಸ್ನಲ್ಲಿ ಕಂಪನಿ ಪರವಾನಗಿ ಪಡೆಯಬೇಕಾದರೆ ಷರತ್ತುಗಳನ್ನು ವಿಧಿಸಲಾಗುತ್ತದೆ.
ಆ ಕಂಪನಿಗಳು ಷರತ್ತುಗಳಿಗೆ ಬದ್ಧವಾಗಿರಬೇಕು ಮತ್ತು ಆಯೋಗವೂ ಕಂಪನಿಯನ್ನು ಮೇಲ್ವಿಚಾರಣೆ ಮಾಡುತ್ತಿರುತ್ತದೆ. ಈ ಷರತ್ತುಗಳನ್ನು ಒಪ್ಪಿದ ಕಂಪನಿಗಳನ್ನು ಶೆಲ್ ಕಂಪನಿಗಳು ಎಂದು ಹೇಳುವುದು ಆಧಾರ ರಹಿತ ಎಂದು ಅವರು ತಿಳಿಸಿದರು.
ಶತಕೋಟ್ಯಧಿಪತಿ ಗೌತಮ್ ಅದಾನಿ ಸಮೂಹ ಮಾರಿಷಸ್ ಮೂಲದ ಶೆಲ್ ಕಂಪನಿಗಳನ್ನು ಬಳಸಿ ಸ್ಟಾಕ್ ಮಾರುಕಟ್ಟೆಯಲ್ಲಿ ಷೇರುಗಳ ಬೆಲೆಯನ್ನು ಕೃತಕವಾಗಿ ಹೆಚ್ಚಳ ಮಾಡಿದೆ ಎಂದು ಹಿಂಡೆನ್ಬರ್ಗ್ ಆರೋಪಿಸಿತ್ತು.
ಅದಾನಿ ಸಮೂಹದ ಕಂಪನಿಗಳ ವಿರುದ್ಧ ಹಿಂಡೆನ್ಬರ್ಗ್ ಸಂಶೋಧನಾ ವರದಿಯಲ್ಲಿನ ಆರೋಪಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ನೇಮಕ ಮಾಡಿದ ಸಮಿತಿ ತನ್ನ ತನಿಖಾ ವರದಿಯನ್ನು ಸಲ್ಲಿಸಿದೆ.