ಮುಂಬೈ : ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸನ್ನು ಹೆಚ್ಚಿಸುವ ಯಾವುದೇ ಯೋಜನೆ ಕೇಂದ್ರ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
ನ್ಯಾಯಾಧೀಶರ ನಿವೃತ್ತಿ ವಯಸ್ಸು ಮತ್ತು ನ್ಯಾಯಾಂಗದಲ್ಲಿ ಪ್ರಕರಣಗಳು ಬಾಕಿ ಉಳಿಯಲು ಕಾರಣವಲ್ಲ ಎಂದು ತಿಳಿಸಿದರು.
ಮುಂಬೈನಲ್ಲಿ ನಡೆದ ಖಾಸಗಿ ವಾಹಿನಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾವು ನ್ಯಾಯಾಧೀಶರ ಅಧಿಕಾರವಧಿಯನ್ನು ಹೆಚ್ಚಿಸುತ್ತಿಲ್ಲ.
ನಾವು ಸುಪ್ರೀಂ ಕೋರ್ಟ್ಗೆ 65 ವರ್ಷ ಮತ್ತು ಹೈಕೋರ್ಟ್ಗೆ 62 ವರ್ಷ ನಿವೃತ್ತಿ ವಯಸ್ಸು ಸರಿ ಎಂದು ಭಾವಿಸುತ್ತೇವೆ. ಮುಂದೆ ಇದು ಬದಲಾಗಬಹುದು. ಆದರೆ ಸದ್ಯ ಸರ್ಕಾರದ ಮುಂದೆ ಈ ಬಗ್ಗೆ ಪ್ರಸ್ತಾಪಗಳಿಲ್ಲ ಎಂದರು.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!